ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ – ಸಿಎಂ ಬಸವರಾಜ ಬೊಮ್ಮಾಯಿ.

Promotion

ಬೆಂಗಳೂರು,ಆಗಸ್ಟ್,13,2022(www.justkannada.in): ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಿಂದಲೇ  ಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಜನರ ಉತ್ಸಾಹ, ಒತ್ತಾಸೆ, ಒತ್ತಡ, ಸಚಿವರ ಅಪೇಕ್ಷೆ ಹಿನ್ನೆಲೆಯಲ್ಲಿ ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಿಂದಲೇ ಜನೋತ್ಸವಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ . ಸರ್ಕಾರದ ಮೂರು ವರ್ಷಗಳ ಸಾಧನೆ ಬಗ್ಗೆ ಉತ್ಸವದ ಮೂಲಕ ಸಂಭ್ರಮಿಸಲು ಜನರು ತಯಾರಾಗಿದ್ದಾರೆ ಎಂದು ತಿಳಿಸಿದರು.

ಜನೋತ್ಸವ ಕಾರ್ಯಕ್ರಮದ ಕುರಿತು ಇಂದು ಕೇಂದ್ರ ನಾಯಕರ ಜೊತೆಗೆ ಚರ್ಚಿಸಿದ ಬಳಿಕ ಯಾರೆಲ್ಲ ಭಾಗವಹಿಸಲಿದ್ದಾರೆ ಎನ್ನುವುದು ತಿಳಿಯಲಿದೆ   ಎಂದು ಸಿಎಂ ಬೊಮ್ಮಾಯಿ ಹೇಳಿದರು.

Key words: Janotsava -Doddaballapur -28th August-  CM Basavaraja Bommai.