ಜಾವಗಲ್ ಶ್ರೀನಾಥ್, ತೆಂಡೂಲ್ಕರ್ ದಾಖಲೆ ಮುರಿದ ಜಸ್ಪ್ರೀತ್ ಬುಮ್ರಾ!

Promotion

ಚೆನ್ನೈ, ಫೆ.05, 2020 (www.justkannada.in)

ಟೀಮ್ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ವಿಶಿಷ್ಟ ದಾಖಲೆ ಬರೆದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಮೈದಾನಕ್ಕಿಳಿಯುತ್ತಿದ್ದಂತೆ ಹೊರಗೆ 17 ಟೆಸ್ಟ್ ಪಂದ್ಯಗಳನ್ನು ಆಡಿದ ನಂತರ ಭಾರತದಲ್ಲಿ ಬುಮ್ರಾ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದಾರೆ.

ಈ ಮೂಲಕ ಜಾವಗಲ್ ಶ್ರೀನಾಥ್ ಮತ್ತು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ವಿದೇಶದಲ್ಲಿ ಹೆಚ್ಚು ಟೆಸ್ಟ್ ಆಡಿದ ನಂತರ ಭಾರತದಲ್ಲಿ ಮೊದಲ ಟೆಸ್ಟ್ ಆಡಿದ ಆಟಗಾರರ ಪಟ್ಟಿಯಲ್ಲಿ ಬುಮ್ರಾ ಮೊದಲ ಸ್ಥಾನದಲ್ಲಿದ್ದಾರೆ.

ಶ್ರೀನಾಥ್ ವಿದೇಶದಲ್ಲಿ 12 ಟೆಸ್ಟ್ ಆಡಿದ ನಂತರ ಭಾರತದಲ್ಲಿ ತಮ್ಮ ಮೊದಲ ಟೆಸ್ಟ್ ಆಡಿದ್ದರು.