ಉಪಚುನಾವಣೆ ಬಳಿಕ ಜೆಡಿಎಸ್-ಬಿಜೆಪಿ ಮೈತ್ರಿ ಕುರಿತು ಅಚ್ಚರಿ ಹೇಳಿಕೆ: ಜಿಟಿಡಿ ಜತೆ ನೋ ಟಾಕಿಂಗ್  ಎಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

kannada t-shirts

ಮೈಸೂರು,ನ,21,2019(www.justkannada.in): ಉಪಚುನಾವಣೆ ಬಳಿಕ ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುವ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಸಾಕಷ್ಟು ಕುತೂಹಲ ಮೂಡಿಸಿದೆ. ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ದರೇ ಸರ್ಕಾರ ಪತನವಾಗಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಡಿಸೆಂಬರ್ 9 ರಂದು ಫಲಿತಾಂಶ ಕಾದು ನೋಡುವೆ. ಆನಂತರ ಬೆಳವಣಿಗೆ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೆಚ್.ಡಿಕೆ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜಿ.ಟಿ.ಡಿ ಜೊತೆ ನೋ ಟಾಕಿಂಗ್ . ನಾನು ಜಿ.ಟಿ.ದೇವೆಗೌಡರ ಜೊತೆ ಮಾತನಾಡುವ ಪರಿಸ್ಥಿತಿಯಲ್ಲಿ ಇಲ್ಲ. ಅವರೇ ನಮ್ಮ ಪಕ್ಷದ ಅಭ್ಯರ್ಥಿ ನಿಂತಿದ್ದಾನೆ ಅಂತ ಬೆಂಬಲ ಕೊಟ್ಟರೆ ಸ್ವಾಗತ ಎಂದರು. ಹಾಗೆಯೇ  ಮಾಜಿ ಸಿಎಂ ಸಿದ್ದರಾಮಯ್ಯ, ಜಿ.ಟಿ.ದೇವೆಗೌಡರ ಬೆಂಬಲ ಪಡೆಯುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿಕೆ, ಚುನಾವಣೆ ಎಂದ ಮೇಲೆ ಎಲ್ಲರು ಒಂದೊಂದು ತಂತ್ರ ಮಾಡ್ತಾರೆ, ಒಬ್ಬೊಬ್ಬರ ಬೆಂಬಲ ಕೋರುತ್ತಾರೆ. ಅದೇ ರೀತಿ ಸಿದ್ದರಾಮಯ್ಯ ಜಿ.ಟಿ.ದೇವೆಗೌಡರ ಬೆಂಬಲ ಕೇಳಿರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಒತ್ತಡ ತಂತ್ರ ಅನುಸರಿಸಿ ಚುನಾವಣೆ ಗೆಲ್ಲಲು ಹೊರಟಿದೆ.ಇದೇ ವೇಳೆ ಬಿಜೆಪಿ ವಿರುದ್ದ ಹರಿಹಾಯ್ದ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಒತ್ತಡ ತಂತ್ರ ಅನುಸರಿಸಿ ಚುನಾವಣೆ ಗೆಲ್ಲಲು ಹೊರಟಿದೆ. ಹಿರೇಕೆರೂರಿನಲ್ಲಿ ನಮ್ಮ ಅಭ್ಯರ್ಥಿಯಾಗಬೇಕಿದ್ದ ಸ್ವಾಮೀಜಿಯವರನ್ನು ಚುನಾವಣ ಕಣದಿಂದ ಹಿಂದೆ ಸರಿಸಲು ಸಿಎಂ ಯಡಿಯೂರಪ್ಪ  ಪುತ್ರನೇ ಸಭೆ ನಡೆಸಿದ್ದಾರೆ. ಅದೇ ರೀತಿ ರಂಭಾಪುರಿ ಸ್ವಾಮೀಜಿಯ ಮನವೊಲಿಸುತ್ತಿದ್ದಾರಂತೆ‌. ಇಷ್ಟು ಒತ್ತಡಗಳನ್ನಾಕಿ ಚುನಾವಣೆ ಗೆಲ್ಲುವ ಅಗತ್ಯ ಇದೆಯಾ. ನಾನು ಸ್ವಾಮೀಜಿಗೆ ಕರೆದು ಟಿಕೆಟ್ ಕೊಟ್ಟಿರಲಿಲ್ಲ. ಅವರೇ ನಿಮ್ಮ ಪಕ್ಷದಿಂದ ಟಿಕೆಟ್ ಕೊಡಿ ಅಂದ್ರು‌. ಅದೇ ರೀತಿ ಅವರ ಅಭಿಮಾನಿಗಳು ಒತ್ತಡ ಹಾಕಿದ್ರು‌ ಎಂದು ಹೇಳಿದರು.

ಈ ಉಪಚುನಾವಣೆಯಲ್ಲಿ ಅನರ್ಹ ಶಾಸಕರನ್ನ ಸೋಲಿಸುವುದೇ ನಮ್ಮ ಗುರಿ ಎಂದು ಮಾಜಿ ಸಿಎಂ ಹೆಚ್.ಡಿಕೆ ತಿಳಿಸಿದರು.

Key words: JDS-BJP -alliance -after -by-election- Former CM -HD Kumaraswamy – No Talking – GT Devegowda

website developers in mysore