ರಾಜ್ಯ ಬಿಜೆಪಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಟೀಕೆ: ಸಿಎಂ ಬಿಎಸ್ ವೈರನ್ನ ರೋಮ್ ದೊರೆಗೆ ಹೋಲಿಸಿ ವ್ಯಂಗ್ಯವಾಡಿದ ಜೆಡಿಎಸ್…

Promotion

ಬೆಂಗಳೂರು,ಆ,7,2019(www.justkannada.in):  ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು ನೆರೆ ಆವರಿಸಿರುವ ವೇಳೆ ದೆಹಲಿ ಭೇಟಿಗೆ ಹೋಗಿದ್ದ  ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ದ ಜೆಡಿಎಸ್ ಟ್ವಿಟ್ಟರ್ ನಲ್ಲಿ ಕಿಡಿಕಾರಿದೆ.

ಭೀಕರ ಮಳೆಯಿಂದಾಗಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಅತ್ತ ಸಿಎಂ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಸಂಬಂಧ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ಹೋಗಿದ್ದಕ್ಕೆ  ಜೆಡಿಎಸ್ ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

 ಸರ್ಕಾರದ ಕಾರ್ಯವೈಖರಿ ಬಗ್ಗೆ ಟ್ವಿಟ್ಟರ್ ನಲ್ಲಿ ಟ್ವಟ್ ಮಾಡಿ ಕಿಡಿಕಾರಿರುವ ಜೆಡಿಎಸ್ , ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ, ಹಾಗೆಯೇ ಉತ್ತರ ಕರ್ನಾಟಕ ಭಾರೀ ಮಳೆಯಿಂದಾಗಿ ಜರ್ಜರಿತವಾಗಿರುವಾಗ ಯಡಿಯೂರಪ್ಪನವರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಕರ್ನಾಟಕದಲ್ಲಿ ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿ ಮಂಡಲವೂ ಇಲ್ಲ. ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ ಮರ್ಯಾದಾ ಪುರುಷೋತ್ತಮರೇ ಎಂದು ಜೆಡಿಎಸ್ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ವಿರುದ್ಧ  ಗುಡುಗಿದೆ.

ಸಚಿವ ಸಂಪುಟ ರಚನೆಗೆ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಹೈಕಮಾಂಡ್ ಸೂಚನೆ ಮೇರೆಗೆ ಪ್ರವಾಸವನ್ನ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ಆಗಮಿಸುತ್ತಿದ್ದು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

Key words: JDS- Criticized-  state -BJP government- CM BS yeddyurappa