ಭಾರತ್ ಜೋಡೋ ಯಾತ್ರೆ ಪರ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಬ್ಯಾಟಿಂಗ್.

Promotion

ಮೈಸೂರು,ಸೆಪ್ಟಂಬರ್,30,2022(www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕವನ್ನ ಪ್ರವೇಶಿಸಿದ್ದು 21 ದಿನಗಳ ಕಾಲ ಇಲ್ಲಿ ಕಾಂಗ್ರೆಸ್ ನಾಯಕರು ಯಾತ್ರೆ ನಡೆಸಲಿದ್ದಾರೆ.

ಈ ಮಧ್ಯೆ ಭಾರತ್ ಜೋಡೋ ಯಾತ್ರೆ ಪರ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಬ್ಯಾಟ್ ಬೀಸಿದ್ದಾರೆ.  ಒಳ್ಳೆಯ ಉದ್ದೇಶ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಯಾತ್ರೆ ಮಾಡುತ್ತಿದ್ದಾರೆ.  ಕಾಂಗ್ರೆಸ್ ಭಾವನೆ ಸಂದೇಶ ಉತ್ತಮವಾಗಿದೆ.  ಶಾಂತಿಯ ಸಂದೇಶ ಕೋಡೋಕೆ ಪಾದಯಾತ್ರೆ ಮಾಡುತ್ತಿದ್ದಾರೆ.  ಕಾಂಗ್ರೆಸ್ ಗೆ ಒಳ್ಳೆಯದಾಗಲಿ ಎಂದು ಶುಭಹಾರೈಸಿದ್ದಾರೆ.

ಜೆಡಿಎಸ್ ಜೊತೆ ಮುನಿಸಿಕೊಂಡಿದ್ಧ ಶಾಸಕ ಜಿ.ಟಿ ದೇವೇಗೌಡರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

Key words: JDS –MLA- GT Deve Gowda -batting -Bharat Jodo Yatra.