ಉಪಚುನಾವಣೆಯಲ್ಲಿ ಜೆಡಿಎಸ್ ಗೆ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಟಾರ್ಗೆಟ್ -ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ.

ಹುಬ್ಬಳ್ಳಿ,ಅಕ್ಟೋಬರ್,7,2021(www.justkannada.in):  ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರಿದ್ದು, ಈ ಮಧ್ಯೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನ ಕಣಕ್ಕಿಳಿಸಿ ಜೆಡಿಎಸ್ ತೋರಿರುವ ನಡೆ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟೀಕಿಸಿದ್ದಾರೆ.

ಜೆಡಿಎಸ್ ಉದ್ದೇಶಪೂರ್ವಕವಾಗಿ ನಮ್ಮ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದೆ. ಹಾನಗಲ್ ಹಾಗೂ ಸಿಂದಗಿಯಲ್ಲಿ ಬಿಜೆಪಿಗೆ ಸಹಾಯವಾಗಲಿ ಎಂದು ಅಲ್ಪಸಂಖ್ಯಾತರನ್ನು ಕಣಕ್ಕಿಳಿಸಿದೆ. ಈ ಮೂಲಕ ಬಿಜೆಪಿ ಪರ ಒಲವು ತೋರುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಅವರು,  ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳ ಕಣಕ್ಕಿಳಿಸಿದೆ. ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಮ್ಮ ಅಭ್ಯಂತರವಿಲ್ಲ. ಆದರೆ, ಎಲ್ಲಿ ಕಣಕ್ಕಿಳಿಸಬೇಕಿತ್ತೊ ಅಲ್ಲಿ ನಿಲ್ಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿಂದೆ ಮಂಡ್ಯ, ಹಾಸನ ಮತ್ತಿತರ ಕಡೆಗಳಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಕಣಕ್ಕಿಳಿಸಬೇಕಿತ್ತು. ಹಳೇ ಮೈಸೂರು ಭಾಗದಲ್ಲಿ ಮಾತ್ರ ಜೆಡಿಎಸ್ ಪ್ರಾಬಲ್ಯ ಹೊಂದಿದೆ. ಅಲ್ಲಿ ಕಾಂಗ್ರೆಸ್ ಸಹ ಪ್ರಬಲವಾಗಿದೆ. ಹೀಗಾಗಿ ಜೆಡಿಎಸ್ ಪದೇ ಪದೇ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಸಿದ್ಧರಾಮಯ್ಯ ಕಿಡಿ ಕಾರಿದರು.

Key words: JDS -Target – Congress -Intentionally – By-Election- Former CM -Siddaramaiah

ENGLISH SUMMARY…

JDS is targeting Cong. purposefully in the byelections: Former CM Siddaramaiah
Hubballi, October 7, 2021 (www.justkannada.in): The byelections for the Hanagal and Sindhagi assembly constituencies are fast approaching. In the meantime, former Chief Minister Siddaramaiah has criticized the JDS alleging it of targeting the Congress party purposefully by fielding candidates from the minority community.
“The JDS is purposefully targeting our party by fielding minority community candidates in the byelections in Hanagal and Sindhagi constituencies. This way, the JDS is exhibiting its pro-BJP stand,” Siddaramaiah alleged.
Speaking to the media persons regarding this, he said, “We don’t have any objection for fielding candidates from the minority community, but we are not satisfied with JDS because not fielding the minority community candidates from where they should have fielded.”
“They should have fielded minority community candidates in Mandya, Hassan, and other constituencies. JDS has a stronghold in the old Mysuru region, and Congress also is strong in those constituencies. This way, the JDS is targeting Congress party again and again,” he expressed his displeasure.
Keywords: Former Chief Minister Siddaramaiah/ JDS/ Congress party/ minority community candidates