ಜ್ಞಾನವಾಪಿ ಮಸೀದಿ ವಿವಾದ: ವಿಚಾರಣೆ ಮೇ 26ಕ್ಕೆ ಮುಂದೂಡಿಕೆ.

ಉತ್ತರ ಪ್ರದೇಶ,ಮೇ,24,2022(www.justkannada.in): ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿಚಾರಣೆಯನ್ನು ವಾರಾಣಸಿ ಜಿಲ್ಲಾ ಕೋರ್ಟ್‌ ಮೇ 26ಕ್ಕೆ ಮುಂದೂಡಿದೆ.

ಆಯೋಗದ ಸಮೀಕ್ಷಾ ವರದಿಗೆ ಆಕ್ಷೇಪಣೆ ಸಲ್ಲಿಸಲು ಎರಡೂ ಕಡೆಯವರಿಗೆ ನ್ಯಾಯಾಲಯ ಅವಕಾಶ ನೀಡಿ ವಿಚಾರಣೆಯನ್ನ ಮೇ.26ಕ್ಕೆ ಮುಂದೂಡಿದೆ. ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಲು ಕೋರ್ಟ್ ಸೂಚಿಸಿದೆ.

ಜ್ಞಾನವಾಪಿ ಮಸೀದಿ ಪ್ರಕರಣದ ವಾದ-ವಿವಾದ ಆಲಿಸಿ ವಿಚಾರಣೆ  ಪೂರ್ಣಗೊಳಿಸಿದ ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯ ವಾದವನ್ನು ಆಲಿಸಿದರು. ನಾಲ್ವರು ಹಿಂದೂ ಅರ್ಜಿದಾರರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

Key words: jnanavapi Mosque –Controversy-hearing -May 26.