ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಉಮೇಶ್ ಜಾದವ್ ನೀಡಿದ ಪ್ರತಿಕ್ರಿಯೆಯೇನು

ಕಲಬುರಗಿ: ಜೂ-2:(www.justkannada.in) ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಉಮೇಶ್ ಜಾದವ್, ನನಗೆ ಸಚಿವ ಸ್ಥಾನ ಸಿಕ್ಕಿದ್ದರೆ ಸಮರ್ಥವಾಗಿ ನಿಭಾಯಿಸುತ್ತಿದ್ದೆ. ಆದರೆ ಸಧ್ಯಕ್ಕೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಸ್ಥಾನ ನೀಡಿವ ನಿರೀಕ್ಷೆಯಿದೆ ಎಂದಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಣಿಸಿ ಲೋಕಸಭೆ ಪ್ರವೇಶಿಸಿರುವ ತಾವು ಕೇಂದ್ರದ ಸಚಿವ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಆದರೆ ಸಚಿವ ಸ್ಥಾನ ನೀಡಿದ್ದರೆ ಉತ್ತಮವಾಗಿ ನಿಭಾಯಿಸುತ್ತಿದ್ದೆ. ಮುಂದಿನ ದಿನಗಳಲ್ಲಿ ಹೈದರಾಬಾದ್-ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನ ನಿಡಬಹುದು ಎಂದು ಹೇಳಿದರು.

ನನಗೆ ಸಚಿವ ಸ್ಥಾನ ಕೊಡಲಿ ಅಥವಾ ಕೊಡದೇ ಇರಲಿ. ಕೆಲಸ ಮಾಡಲು ಸಿದ್ಧ. ಮಲ್ಲಿಕಾರ್ಜು ಖರ್ಗೆ ಅವರು ಹಿರಿಯ ರಾಜಕಾರಣಿ. ಹಾಗಾಗಿ ಅವರ ಸಲಹೆ ಪಡೆದು ಕಲಬುರಗಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವೆ. ಖರ್ಗೆ ಅವರ ಕಾಲದಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಕೆಲಸ ಮಾಡುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಉಮೇಶ್ ಜಾದವ್ ನೀಡಿದ ಪ್ರತಿಕ್ರಿಯೇನು

Kalaburagi,BJP,Umesh Jadhav,central ministry expecting