ಕಲ್ಬುರ್ಗಿ ಪಾಲಿಕೆ ಮೈತ್ರಿ ವಿಚಾರ: ಹೆಚ್.ಡಿಕೆ ಭೇಟಿ ಬಳಿಕ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ…

ರಾಮನಗರ,ಸೆಪ್ಟಂಬರ್,11,2021(www.justkannada.in):  ಬಹಳ ಕುತೂಹಲ ಕೆರಳಿಸಿರುವ ಕಲ್ಬರ್ಗಿ ಮಹಾನಗರ ಪಾಲಿಕೆಯ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಆರ್.ಅಶೋಕ್ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾದ ಸಚಿವ ಆರ್.ಅಶೋಕ್ ಕಲ್ಬುರ್ಗಿ ಪಾಲಿಕೆ ಮೈತ್ರಿ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿದ್ದೇನೆ. ಕಲ್ಬುರ್ಗಿ ಪಾಲಿಕೆ ಮೈತ್ರಿ ವಿಚಾರವಾಗಿ ಚರ್ಚೆ, ಮಾತುಕತೆ ನಡೆಸಿದ್ದೇನೆ. ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಅವರು ಒಲವು ತೋರಿದ್ದಾರೆ. ಸೋಮವಾರ ಸಭೆ ಬಳಿಕ ತಿಳಿಸುವುದಾಗಿ ಹೇಳಿದ್ದಾರೆ ಎಂದರು.

ಕಲ್ಬರ್ಗಿ ಪಾಲಿಕೆ ಗದ್ದುಗೆ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ಬಹಳ ಕಸರತ್ತು ನಡೆಸುತ್ತಿದ್ದು ಜೆಡಿಎಸ್ ಜತೆ ಮೈತ್ರಿಗೆ  ಮುಂದಾಗುತ್ತಿದ್ದಾರೆ. ಈ ಮಧ್ಯೆ ಜೆಡಿಎಸ್ ಯಾರಿಗೆ ಬೆಂಬಲ ನೀಡುತ್ತಾರೋ ಅವರು ಕಲ್ಬುರ್ಗಿ ಪಾಲಿಕೆಯ ಅಧಿಕಾರ ಹಿಡಿಯಲಿದ್ದಾರೆ. ಇನ್ನು ಸೋಮವಾರ ಸಂಜೆ 4 ಗಂಟೆಗೆ ಈ ಸಂಬಂಧ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು  ಜೆಡಿಎಸ್ ಮುಖಂಡರ ಜತೆ ಚರ್ಚಿಸಲಿದ್ದಾರೆ.

Key words:  Kalburgi –city corporation-alliance –minister R.ashok-meet-H.D kumaraswamy