ಜಾತ್ರೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ: ಮೂವರು ಯುವಕರು ಸಾವು….

Promotion

ಕಲ್ಬುರ್ಗಿ,ಜ,30,2020(www.justkannada.in): ಜಾತ್ರೆ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಬೈಕ್ ಗೆ ಲಾರಿ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ಈ ಘಟನೆ  ಸಂಭವಿಸಿದೆ‌. ರಾಜಕುಮಾರ್ ಖಂಡೇಕರ್ (24), ಗುಂಡಪ್ಪಾ ಮಾನೆ (20), ಮಹಾದೇವಪ್ಪಾ ಸಾಲೆಗಾಂವ್ (30) ಮೃತಪಟ್ಟವರು. ಮೃತರೆಲ್ಲರೂ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದವರು ಎನ್ನಲಾಗಿದೆ.

ಮೃತ ಮೂವರು ಯುವಕರು ಜಾತ್ರಾ‌ ಮಹೋತ್ಸವದಲ್ಲಿ ಪಾಲ್ಗೊಂಡು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಯಮಸ್ವರೂಪಿಯಾಗಿ ಬಂದ ಲಾರಿ ಬೈಕ್ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಈ ಕುರಿತು ರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: kalburgi-three –youth -death