ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ- ಧ್ವಜಾರೋಹಣ ನೆರವೇರಿಸಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ

ಕಲಬುರಗಿ, ಸೆಪ್ಟೆಂಬರ್ 17,2020(www.justkannada.in): ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಎನ್.ಇ‌.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ,ಸಂಸದ ಡಾ. ಉಮೇಶ ಜಾಧವ್, ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ್ ಮತ್ತಿಮೂಡ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಶಾಸಕ  ಬಿ.ಜಿ. ಪಾಟೀಲ್ ಉಪಸ್ಥಿತರಿದ್ದರು.kalyana-karnataka-utsava-cm-bs-yeddyurappa-development

ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಹಲವು ಕ್ರಮಗಳನ್ನ ಕೈಗೊಂಡಿದೆ. ಕೃಷಿ ಆರೋಗ್ಯ,ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಈ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ.  40 ಕೋಟಿ ರೂ. ವೆಚ್ಚದಲ್ಲಿ ವಸತಿ ವ್ಯವಸ್ಥೆ, ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಸಹಾಯ ಮಾಡಲಾಗುತ್ತದೆ. ಮುಂದಿನ 4 ತಿಂಗಳು ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಎಂದು ನುಡಿದರು.

Key words: kalyana Karnataka-utsava- CM-BS yeddyurappa-development