ಮನೆಯಂಗಳದಲ್ಲಿ ಕನಕದಾಸ ಜಯಂತಿ ಸರಳವಾಗಿ ಆಚರಣೆ

Promotion

ಮೈಸೂರು, ಡಿಸೆಂಬರ್,03,2020(www.justkannada.in) : ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾಮಂದಿರದ ಮನೆಯಂಗಳದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಯೋಜಿಸಿದ್ದ ದಾಸ ಶ್ರೇಷ್ಠ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.logo-justkannada-mysore

ಕೋವಿಡ್ 19 ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಸರಳ ಹಾಗೂ ಸಾಂಕೇತಿಕವಾಗಿ ಜಯಂತಿ ಆಚರಿಸಲಾಯಿತು. ಗಣ್ಯರಿಂದ ಕನಕದಾಸರ ಮೂರ್ತಿಗೆ ಪುಷ್ಪಾರ್ಚನೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ಕನಕದಾಸರ ಕೀರ್ತನೆಗಳ ಪ್ರಸ್ತುತಪಡಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ರವರ ಅನುಪಸ್ಥಿತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್. ಚೆನ್ನಪ್ಪ ಜಯಂತಿ ಪ್ರಯುಕ್ತ ಶುಭ ಹಾರೈಕೆ ಸಂದೇಶ  ಓದಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಎಲ್.ನಾಗೇಂದ್ರ, ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ, ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಮಂಜುನಾಥ ಸ್ವಾಮಿ, ಜಿಲ್ಲಾಪಂಚಾಯತ್ ಸಿಇಓ ಭಾರತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಮುಡಾ ಆಯುಕ್ತ ನಟೇಶ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಪ್ಪ ಸೇರಿದಂತೆ ಇನ್ನಿತರ ಗಣ್ಯರ ಉಪಸ್ಥಿತರಿದ್ದರು.

Kanakadasa-Jayanti-simply-celebration-household

key words : Kanakadasa-Jayanti-simply-celebration-household