ಕನ್ನಡದ ಹಿರಿಯ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ.

Promotion

ಬೆಂಗಳೂರು,ಜನವರಿ,23,2023(www.justkannada.in): ಸೂರ್ಯವಂಶ’, ‘ಯಜಮಾನ ಸೇರಿದಂತೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ  ನಟಿಸಿದ್ದ ಹಿರಿಯ ನಟ ಲಕ್ಷ್ಮಣ್(74)  ಹೃದಯಾಘಾತದಿಂದ ನಿಧನರಾಗಿದ್ದಾರೆ.

ಭಾನುವಾರ ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಯಿತು. ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ . ಲಕ್ಷ್ಮಣ್ ಅವರ​ ನಿಧನಕ್ಕೆ  ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.

ಲಕ್ಷ್ಮಣ್ ಅವರು ಪೋಷಕ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಅನೇಕ ಸಿನಿಮಾಗಳಲ್ಲಿ ಅವರು ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದರು.  ‘ಒಲವಿನ ಉಡುಗೊರೆ’, ‘ಸಾಂಗ್ಲಿಯಾನ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು.

Key words: Kannada actor- Laxman -passed away – heart attack.