ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನಕ್ಕೆ ಡಿಸಿಎಂ ಅಶ್ವಥ್ ನಾರಾಯಣ್, ಹೆಚ್.ಡಿಕೆ ಸೇರಿ ಹಲವರಿಂದ ಸಂತಾಪ…

Eಬೆಂಗಳೂರು,ಏಪ್ರಿಲ್,19,2021(www.justkannada.in): ನಾಡಿನ ಖ್ಯಾತ ಸಂಶೋಧಕ, ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಡಿಸಿಎಂ ಅಶ್ವಥ್ ನಾರಾಯಣ್, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.jk

ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ ಪ್ರೊ. ಜಿ.  ವೆಂಕಟಸುಬ್ಬಯ್ಯ ಕಳೆದ 8 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ನಡುವೆ ಮಧ್ಯರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೈಸೂರು ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಂನಲ್ಲಿ ಜನಿಸಿದ್ದ ವೆಂಕಟಸುಬ್ಬಯ್ಯ ಮೈಸೂರಿನಲ್ಲಿ ಶಿಕ್ಷಣ ಪಡೆದಿದ್ದರು. ಪ್ರತಿಷ್ಠಿತ ಪದ್ಮಶ್ರೀ, ಪಂಪ ಪ್ರಶಸ್ತಿ, ಭಾಷಾ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾಗಿದ್ದರು. ಕನ್ನಡದ ನಿಘಂಟು ಶಾಸ್ತ್ರ, ಪ್ರಾಚೀನ ಸಾಹಿತ್ಯ, ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ವೆಂಕಟಸುಬ್ಬಯ್ಯ ಅವರು ಅಪೂರ್ವ ಸಾಧನೆ ಮಾಡಿದ್ದಾರೆ.

ಕನ್ನಡ ಸಾರಸ್ವತ ಲೋಕದ ಮಹೋನ್ನತ ಕೊಂಡಿ ಕಳಚಿಬಿದ್ದಿದೆ: ಡಿಸಿಎಂ ಅಶ್ವಥ್ ನಾರಾಯಣ್

ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

108 ವರ್ಷಗಳ ಶತಾಯುಷಿ, ನಮ್ಮ ನಾಡಿನ ಹಿರಿಯ ʼಜೀವಿʼಯಾಗಿದ್ದ ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕದ ಮಹೋನ್ನತ ಕೊಂಡಿಯೊಂದು ಕಳಚಿಬಿದ್ದಂತೆ ಆಗಿದೆ ಎಂದು ಅವರು ಹೇಳಿದ್ದಾರೆ.

ನಡೆದಾಡುವ ನಿಘಂಟು, ಶಬ್ದಬ್ರಹ್ಮ ಎಂದೇ ನಾಡಿನಲ್ಲಿ ಹೆಸರಾಗಿದ್ದ ಅವರು, ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಿಸಿದ್ದಾರೆ. ʼಇಗೋ ಕನ್ನಡʼ  ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದರು ಎಂದು ಡಿಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಆ ಹಿರಿಯ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಪ್ರಾರ್ಥಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ…

ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿದನಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ನಾಡಿನ ಖ್ಯಾತ ಸಂಶೋಧಕ, ನಿಘಂಟು ತಜ್ಞ ಫ್ರೊ. ಜಿ. ವೆಂಕಟಸುಬ್ಬಯ್ಯ ಅವರ  ನಿಧನಕ್ಕೆ  ತೀವ್ರ ಕಂಬನಿ  ಮಿಡಿಯುತ್ತೇನೆ.

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು. ನಾಡು-ನುಡಿಗೆ ಸಲ್ಲಿಸಿದ ಸೇವೆ ಅನನ್ಯವಾದದ್ದು.

ನಾಡು-ನುಡಿಯ ಶ್ರೇಷ್ಠ ವಿದ್ವಾಂಸಕನನ್ನು ರಾಜ್ಯ ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.

ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ

ಇನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಹ  ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕನ್ನಡ ಸಾರಸ್ವತ ಲೋಕದ ಧೀಮಂತ,  ಹಿರಿಯ ಸಂಶೋಧಕ, ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಶತಾಯುಷಿಗಳು. ತಮ್ಮ ಸುದೀರ್ಘ ಬದುಕನ್ನು ಕನ್ನಡಕ್ಕಾಗಿಯೇ ಮೀಸಲಿಟ್ಟಿದ್ದ ಕನ್ಮಡದ ಕಟ್ಟಾಳು. ನಿಘಂಟು ರಚನೆ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ವೆಂಕಟಸುಬ್ಬಯ್ಯ ಅವರ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಎಂದು‌ ಅವರು ಕಂಬನಿ ಮಿಡಿದಿದ್ದಾರೆ. Kannada Dictionary- Specialist -Pro. G. Venkatasubbayya- death - DCM Ashwath Narayan- HDK-condole

ನಿಘಂಟು ಅಷ್ಟೇ ಅಲ್ಲದೇ ಸಾಹಿತ್ಯ, ಸಂಶೋದನೆ, ವಿಮರ್ಶೆ, ಅನುವಾದ ಕ್ಷೇತ್ರಗಳಲ್ಲಿ ಸಾಧನೆ  ಮಾಡುವ ಮೂಲಕ ಅವರು ಕನ್ಮಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತ ಗೊಳಿಸಿದ್ದರು. ಹೀಗಾಗಿ ನಡೆದಾಡುವ ನಿಘಂಟು, ಶಬ್ದಬ್ರಹ್ಮ ಎಂಬ ಬಿರುದುಗಳಿಗೆ ಪ್ರೊ. ವೆಂಕಟಸುಬ್ಬಯ್ಯ ಪಾತ್ರರಾಗಿದ್ದರು.  ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಬಡವಾಗಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಶೋಕ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆಯ ದುಃಖ ವನ್ನು ಎದುರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ. ಪ್ರೊ.  ಜೀ.ವಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ENGLISH SUMMARY….

DCM Ashwathnarayan, HDK and other dignitaries condole the death of litterateur Prof. G. Venkatasubbaiah
Bengaluru, Apr. 19, 2021 (www.justkannada.in): Deputy Chief Minister Ashwathnarayan, former Chief Minister H.D. Kumaraswamy, and several other dignitaries have expressed their grief on the demise of renowned Kannada litterateur, Kannada dictionary expert Prof. G. Venkatasubbaiah.
Prof. G.V. as he was popularly known was suffering from urinary infection and was being treated in a private hospital for the last 8 days. He breathed his last yesterday past midnight.Kannada Dictionary- Specialist -Pro. G. Venkatasubbayya- death - DCM Ashwath Narayan- HDK-condole
Prof. G.V. was born at Ganjam Village near Srirangapatna Taluk, in Mysuru District. He completed his education at Mysuru. He was being conferred with several prestigious awards like the Padmashri, Pampa award, Basha Samman award, etc. His contribution to the development of the Kannada dictionary, ancient literature, and translations is memorable.
Keywords: Prof. G. Venkatasubbaiah/ dies at 108 years of age/ DCM, former CM condoles/ Kannada litterateur Prof. G.V.

Key words: Kannada Dictionary- Specialist -Pro. G. Venkatasubbayya- death – DCM Ashwath Narayan- HDK-condole