ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ವಾಟಾಳ್ ನಾಗರಾಜ್ ಪ್ರತಿಭಟನೆ.

Promotion

ಬೆಂಗಳೂರು,ಜೂನ್,1,2021(www.justkannada.in):  ಕೊರೋನಾ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್  ಪ್ರತಿಭಟನೆ ನಡೆಸಿದರು.jk

ಬಸವೇಶ್ವರ ನಗರದಲ್ಲಿರುವ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ಪ್ರತಿಭಟನೆ ನಡೆಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, 10 ತಿಂಗಳ ಪಠ್ಯವನ್ನ 2 ತಿಂಗಳಲ್ಲಿ ಆನ್‌ಲೈನ್ ನಲ್ಲಿ ನಡೆಸಿ ವಿದ್ಯಾರ್ಥಿಗಳನ್ನ ಪರೀಕ್ಷೆಗೆ ಕೂರಿಸಿದರೆ ಹೇಗೆ? ಹೀಗಾಗಿ ಎಸ್ ಎಸ್ ಎಲ್ ಸಿ ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆಗಳಿಲ್ಲದೆ ಪಾಸ್ ಮಾಡಬೇಕೆಂದು ಒತ್ತಾಯಿಸಿದರು.

ಮಕ್ಕಳು ಯುವಕರಿಗೆ ಕೊರೋನಾ ಇನ್ನಿಲ್ಲದೆ ಬಾಧಿಸುತ್ತಿದೆ. ಸರ್ಕಾರ ಸತ್ತವರಿಗೆ ಸೂಕ್ತ ಪರಿಹಾರ ನೀಡಿಲ್ಲ ಎಂದು ಕಿಡಿಕಾರಿದ ವಾಟಾಳ್ ನಾಗರಾಜ್, ಲಾಕ್ ಡೌನ್ ಗೆ ವಿರೋಧ ವ್ಯಕ್ತಪಡಿಸಿ ಸರ್ಕಾರದ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು.

Key words: kannada fighter-Vatal Nagaraj -protests – Education Minister -Suresh Kumar- residence