ನಾಲ್ಕು ಭಾಷೆಗಳಿಗೆ ಡಬ್ ಆಗುತ್ತಿದೆ ‘ಕನ್ನಡ್ ಗೊತ್ತಿಲ್ಲ’

Promotion

ಬೆಂಗಳೂರು, ಜುಲೈ 14, 2020 (www.justkannada.in): ಹರಿಪ್ರಿಯಾ ನಟನೆಯ ‘ಕನ್ನಡ್ ಗೊತ್ತಿಲ್ಲ’ ಚಿತ್ರ ನಾಲ್ಕು ಭಾಷೆಗಳಿಗೆ ಡಬ್ ಆಗುತ್ತಿದೆ.

‘ಕನ್ನಡ್ ಗೊತ್ತಿಲ್ಲ’ ಚಿತ್ರಮಂದಿರದಲ್ಲಿ ಪ್ರೇಕ್ಷಕರಿಂದ ಅಷ್ಟೇನೂ ಉತ್ತಮ ಪ್ರತಿಕ್ರಿತೆ ಸಿಗದೆ ಹೋದರೂ ಅಮೆಜಾನ್ ಪ್ರೈಮ್ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾದ ಬಳಿಕ ಅದಕ್ಕೆ ಒಳ್ಳೆಯ ಸ್ಪಂದನೆ ಸಿಕ್ಕಿದೆ.

ಪರಭಾಷಿಕರಿಂದಲೂ ಮೆಚ್ಚುಗೆ ಬಂದಿರುವುದರಿಂದ ನಾಲ್ಕು ಭಾಷೆಗಳಿಗೆ ಡಬ್ ಮಾಡಲು ಮುಂದಾಗಿದ್ದಾರೆ. ಆನ್‌ಲೈನ್ ಪ್ಲಾಟ್‌ಫಾರ್ಮ್‌ನಲ್ಲಿ ಪ್ರೇಕ್ಷಕರ ಪ್ರತಿಕ್ರಿಯೆ ಚೆನ್ನಾಗಿರುವುದರಿಂದ ಸಂಜಯ್ ಲಾಲ್ವಾನಿ ಪ್ರೊಡಕ್ಷನ್ಸ್ ಸಂಸ್ಥೆ ಈ ಚಿತ್ರವನ್ನು ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಗೆ ಡಬ್ ಮಾಡಲು ಮುಂದಾಗಿದ್ದಾರೆ.