ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ: ಅತಿ ಹೆಚ್ಚು ಅಂಕಗಳಿಸಿದ ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ಪುರಸ್ಕಾರ…

ಬೆಂಗಳೂರು,ಜನವರಿ,12,2021(www.justkannada.in):  ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ, ಕನ್ನಡ ಮಾಧ್ಯಮ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದ ಹಿನ್ನೆಲೆಯಲ್ಲಿ ಬೆಂಗಳೂರು ವಿಭಾಗದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಇಂದು ಬೆಳಗ್ಗೆ 10.30 ಗಂಟೆಗೆ ಆನ್ ಲೈನ್(ವರ್ಚುವಲ್)ಮೂಲಕ ಆಯೋಜಿಸಿ ಯಶಸ್ವಿಗೊಳಿಸಲಾಯಿತು.kannada-media-award-presentation-program-sslc-pu-students-kannada-development-authority

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಟಿ.ಎಸ್. ನಾಗಾಭರಣ  ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಗೌರವಿಸಿ ಪುರಸ್ಕರಿಸಲಾಯಿತು.

2020-21ರ ಕನ್ನಡ ಮಾಧ್ಯಮ ಪ್ರಶಸ್ತಿ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಎಸ್.ಎಸ್.ಎಲ್.ಸಿ.ಯ  695 ವಿದ್ಯಾರ್ಥಿಗಳು ಮತ್ತು ಪಿ.ಯು.ಸಿ.ಯ 570 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1265 ವಿದ್ಯಾರ್ಥಿಗಳನ್ನು ಗೌರವಿಸಿ, ಪುರಸ್ಕರಿಸಲಾಯಿತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಕನ್ನಡ ಮಾಧ್ಯಮ ಪ್ರಶಸ್ತಿ ಕಾರ್ಯಕ್ರಮವೂ ಒಂದು. ರಾಜ್ಯದಲ್ಲಿ ಕನ್ನಡ ಮಾಧ್ಯಮದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಯನ್ನು ವ್ಯಾಸಂಗ ಮಾಡಿ, ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದೃಷ್ಠಿಯಿಂದ ಈ ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಿಂದ ನಡೆಸುತ್ತಾ ಬಂದಿದೆ.

ಇನ್ನು ಬೆಂಗಳೂರು ವಿಭಾಗದ ಪ್ರತಿ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮೂರು ವಿದ್ಯಾಥಿಗಳಂತೆ ಎಸ್.ಎಸ್.ಎಲ್.ಸಿ.ಯ 195 ಹಾಗೂ ಪಿ.ಯು.ಸಿ.ಯ 158 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 353 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, 300 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.kannada-media-award-presentation-program-sslc-pu-students-kannada-development-authority

ಈ ಪುರಸ್ಕಾರದ ಮೊತ್ತವನ್ನು ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಯ ಮೂಲಕ ವಿದ್ಯಾರ್ಥಿಯ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು. ಪುರಸ್ಕಾರದ ಮೊತ್ತಗಳು ಹೀಗಿವೆ,

ಪ್ರಥಮ ನಗದು ಬಹುಮಾನ 12,000/-,  ದ್ವಿತೀಯ ಬಹುಮಾನ 11,000/-,  ತೃತೀಯ ಬಹುಮಾನ 10,000/-ಗಳು. ಎಲ್ಲಾ ವಿಜೇತ ವಿದ್ಯಾರ್ಥಿಗಳ ಪ್ರಾಧಿಕಾರದ ವತಿಯಿಂದ ನೀಡುವ ಇ- ಪ್ರಶಸ್ತಿ ಪ್ರಮಾಣ ಪತ್ರಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿಕೃತ ಜಾಲತಾಣದಲ್ಲಿ (ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿಕೃತ ಜಾಲತಾಣ https://kannadapraadhikaara.karnataka.gov.in/ ) ಲಭ್ಯವಿರುತ್ತವೆ. ಇಂದಿನ ಸಂಪೂರ್ಣ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿಕೃತ ಫೇಸ್‌ಬುಕ್‌  ಪುಟದ ಲೈವ್‌ನಲ್ಲಿ ವೀಕ್ಷಿಸಬಹುದಿದೆ. (https://www.facebook.com/kannadadevelopmentauthority),

ಈ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ: ಕೆ ಮುರಳೀಧರ ಅವರು  ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ..ಅಬ್ದುಲ್ ರೆಹಮಾನ್ ಪಾಷ, ರೋಹಿತ್ ಚಕ್ರತೀರ್ಥ,ಡಾ.ಸಿ.ಎ ಕಿಶೋರ್ ರವರುಗಳು ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು.

Key words: Kannada media award- presentation- program-SSLC – PU students- Kannada Development Authority