ಬೆಳಗಾವಿಯಲ್ಲಿ ಸಿಡಿದೆದ್ದ ಕರವೇ: ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಮಸಿ ಬಳಿದು ಪ್ರತಿಭಟನೆ.

ಬೆಳಗಾವಿ,ಡಿಸೆಂಬರ್,6,2022(www.justkannada.in):  ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆದ ಮಹಾರಾಷ್ಟ್ರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಿಡಿದೆದ್ದಿದ್ದು, ಮಹಾರಾಷ್ಟ್ರ ನೋಂದಣಿಯ ಲಾರಿಗಳನ್ನ ತಡೆದು ಮಸಿ ಬಳಿದು ಪ್ರತಿಭಟನೆ ನಡೆಸಿದರು.

ಬೆಳಗಾವಿಯ ಹೀರೇಬಾಗೆವಾಡಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ   ಮಹಾರಾಷ್ಟ್ರ ನೋಂದಣಿ ಲಾರಿಗಳನ್ನ ತಡೆದ ಕನ್ನಡ ಸಂಘಟನೆ ಕಾರ್ಯಕರ್ತರು ಲಾರಿಗಳ ಮೇಲೇರಿ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಪುಣೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಇದರಿಂದ ಕೆಲ ಲಾರಿಗಳ ಗಾಜು ಪುಡಿಪುಡಿಯಾಯಿತು. ಅಲ್ಲದೆ ಲಾರಿಗಳ ಚಕ್ರದ ಗಾಳಿ ತೆಗೆದು ಕರವೇ ಕಾರ್ಯರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಮೂಲಕ ಮಹಾರಾಷ್ಟ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ಕರವೇ ಕಾರ್ಯಕರ್ತರನ್ನ ಪೊಲೀಸರು ತಡೆದು ಲಾರಿಗೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಳಿಕ ಕರವೇ ಅಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿ ಕರವೇ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

Key words: Kannada-organization- Belgaum-protest- Maharashtrian lorries