ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಿ- ನಟ ಜಗ್ಗೇಶ್ ಆಗ್ರಹ

Promotion

ಬೆಂಗಳೂರು,ಅಕ್ಟೋಬರ್,30,2021(www.justkannada.in):  ಜಿಮ್ ವರ್ಕೌಟ್ ವೇಳೆ ಹೃದಯಾಘಾತವಾಗಿ ಇಹಲೋಕ ತ್ಯೆಜಿಸಿದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಹಿರಿಯ ನಟ ಜಗ್ಗೇಶ್ ಮನವಿ ಮಾಡಿದ್ದಾರೆ.

ನಟ ಅಪ್ಪು ಅವರ  ನಿಧನಕ್ಕೆ ಸಂತಾಪ ಸೂಚಿಸಿರುವ ನಟ ಜಗ್ಗೇಶ್, ಕನ್ನಡ ಚಿತ್ರರಂಗದ ಉತ್ತಮ ನಟ, ಸಜ್ಜನಿಕೆ ವ್ಯಕ್ತಿತ್ವ, ಸಮಾಜಮುಖಿ ಕಾರ್ಯ ಚಟುವಟಿಕೆ ಮೂಲಕ ಎಲ್ಲರಿಗೂ ಸ್ಫೂರ್ತಿಯಾಗಿದ್ದ ಪುನೀತ್ ರಾಜ್ ಕುಮಾರ್ ಅವರು ಮಾದರಿಯಾಗಿ ಬದುಕಿದ್ದರು.

ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ತಾವೊಬ್ಬ ನಟರಾಗಿದ್ದರೂ ಸಹ ಅನೇಕ ಹೊಸಬರಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದರು.  ಅನಾಥಾಶ್ರಮ, ಹೆಣ್ಣು ಮಕ್ಕಳಿಗೆ ಶಿಕ್ಷಣ ಸೇರಿದಂತೆ ಇನ್ನಿತರ ಚಟುವಟಿಕೆಯನ್ನು  ಹಮ್ಮಿಕೊಂಡಿದ್ದರು. ಇದಲ್ಲದೆ ಕನ್ನಡ ಭಾಷೆ, ಸೇರಿದಂತೆ ಇನ್ನಿತರ ಹೋರಾಟದಲ್ಲಿ ಮುಂಚೂಣಿಯಾಗಿ, ಸಕ್ರಿಯರಾಗಿ ಭಾಗವಹಿಸುತ್ತಿದ್ದರು. ಕನ್ನಡ ಹಾಗೂ ಸ್ಥಳೀಯ ಸಂಸ್ಕೃತಿಗೆ ಒತ್ತನ್ನು ನೀಡುವ ಮೂಲಕ ಉತ್ತಮ ಚಿಂತನೆಯನ್ನು ಹೊಂದಿದ್ದರು. ಅಲ್ಲದೆ ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅತಿ ಕಿರಿಯ ವಯಸ್ಸಿಗೆ ಅವರು ಇನ್ನಿಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ಧಾರೆ.

ಹಾಗೆಯೇ ಪುನೀತ್ ರಾಜ್ ಕುಮಾರ್ ಅವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರ್ಕಾರವು ಈ ಸಾಲಿನ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕೆಂದು ಕೋರುತ್ತೇನೆ ಎಂದು ನಟ ಜಗ್ಗೇಶ್  ಆಗ್ರಹಿಸಿದ್ದಾರೆ.

Key words: Kannada Rajyotsava- Award – Actor Punith Raj Kumar-Actor- Jaggesh

ENGLISH SUMMARY…

Actor Jaggesh demands State Govt. to accord Rajyotsava award to Puneeth Rajkumar
Bengaluru, October 30, 2021 (www.justkannada.in): Expressing his deep grief upon the sad demise of matinee idol Puneeth Rajkumar, Kannada actor Jaggesh has demanded the State Government award the Kannada Rajyotsava award to Puneeth posthumously.
Mentioning the late actor as a good human being he said, Puneeth had also undertaken several social works and set an example to many other celebrities.
“His contribution to Sandalwood is immense. Though he was a star, he provided a platform and opportunity for many newcomers. He was also involved in several social activities by adopting many orphanages, providing free education to girl children, etc.
Keywords: Actor Jaggesh/ Puneeth Rajkumar/ Kannada Rajyotsava award/ posthumously