ನಾಳೆ ಅತ್ಯಂತ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ-ಸಿಎಂ ಬೊಮ್ಮಾಯಿ.

Promotion

ಬೆಂಗಳೂರು,ಅಕ್ಟೋಬರ್,31,2022(www.justkannada.in):  ನಾಳೆ ಕನ್ನಡನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಸಂಭ್ರಮವಾಗಿದ್ದು, ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಾಳೆ ಶಾಲೆಗಳು ಇತರೆ ಸಂಸ್ಥೆಗಳಲ್ಲೂ ಕನ್ನಡ ರಾಜ್ಯೋತ್ಸವ ಆಚರಿಸಬೇಕು ನಾಳೇ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕರತ್ನ ಪ್ರಶಸ್ತಿ ಪ್ರದಾನ ಮಾಡುತ್ತೇವೆ. ನಾಳಿನ ಕಾರ್ಯಕ್ರಮದಲ್ಲಿ ಎಲ್ಲಾ ಅಭಿಮಾನಿಗಳು ಭಾಗವಹಿಸಬೇಕು. ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.

ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣವನ್ನ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹಿಸುತ್ತಿರುವುದಕ್ಕೆ ಕಿಡಿಕಾರಿದ ಸಿಎಂ ಬೊಮ್ಮಾಯಿ,  ತನಿಖೆ ಏನಾಗಿದೆ ಎಂದು ಗೊತ್ತಿದೆ. ಹೀಗಾಗಿ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ  ತನಿಖೆಯಿಂದ ಸತ್ಯ ಹೊರಗೆ ಬರಬೇಕು ಉನ್ನತ ಅಧಿಕಾರಿಗಳ ಮಟ್ಟದಲ್ಲಿ ತನಿಖೆ ನಡೆಯುತ್ತದೆ ಎಂದು ತಿಳಿಸಿದರು.

Key words: Kannada Rajyotsava –celebrations- tomorrow –CM-Basavaraj Bommai.