ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಪಟ್ಟು: ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳಿಂದ ಗಡುವು.

Promotion

ಬೆಳಗಾವಿ,ಅಕ್ಟೋಬರ್,16,2021(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿ ಪ್ರಕಾರ ಎಲ್ಲಾ ಹಬ್ಬಹರಿದಿನಗಳನ್ನ ಸರಳವಾಗಿ ಆಚರಿಸಲಾಗುತ್ತಿದೆ. ದಸರಾ ಹಬ್ಬವನ್ನೂ ಸಹ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲಾಗಿದೆ.

ಈ ಮಧ್ಯೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವವನ್ನ  ಅದ್ಧೂರಿಯಾಗಿ ಆಚರಿಸಲು ಕನ್ನಡ ಪರ ಸಂಘಟನೆಗಳು ಪಟ್ಟು ಹಿಡಿದಿವೆ, ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳು ಸಭೆ ಮಾಡಿ ಚರ್ಚಿಸಿದ್ದು, ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಅಕ್ಟೋಬರ್ 22ರೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಗಡುವು ನೀಡಿವೆ.

ಇದೀಗ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆ ಕನ್ನಡ ಪರ ಸಂಘಟನೆಗಳ ಎಚ್ಚರಿಕೆಗೆ ಸರ್ಕಾರ ಮಣಿದು ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಅನುಮತಿ ನೀಡುತ್ತದೆಯೋ..? ಇಲ್ಲವೋ..? ಎಂಬುದನ್ನ ಕಾದು ನೋಡಬೇಕಿದೆ.

Key words: kannada Rajyotsava-   Deadline- Kannada organization-Govt.