ಕನ್ನಡ ರಾಜ್ಯೋತ್ಸವ ಹಿನ್ನೆಲೆ: ರಾಜ್ಯ ಸರ್ಕಾರಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು.

ಬೆಂಗಳೂರು,ಅಕ್ಟೋಬರ್,26,2021(www.justkannada.in):  ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ, ಪಾಲಿಸಬೇಕಾದ ಕೋವಿಡ್ ನಿಯಮಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ.

ಕನ್ನಡ ರಾಜ್ಯೋತ್ಸವ ಹಿನ್ನೆಲೆ ಹೊರಾಂಗಣ ಕಾರ್ಯಕ್ರಮಕ್ಕೆ ಜನ ಸೇರಲು ನಿರ್ಬಂಧ, ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಜನ ಸೇರಬಾರದು.  ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರು 2 ಡೋಸ್ ಲಸಿಕೆ ಪಡೆದಿರಬೇಕು. ಕೋವಿಡ್ ಲಕ್ಷಣ ರಹಿತರಿಗೆ ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ.

ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.  ಸ್ಯಾನಿಟೈಜೇಷನ್ ಕಡ್ಡಾಯ.  ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಒಂದು ಮೀಟರ್ ಅಷ್ಟು ದೂರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಾರ್ಯಕ್ರಮದಲ್ಲಿ ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲೇಬೇಕು ಎಂಬ ನಿಯಮಗಳನ್ನ ಶಿಫಾರಸ್ಸು ಮಾಡಿದೆ.

Key words: Kannada Rajyotsava –Rule- recommendation – covid Technical Advisory Committee – State Government