ಗೋವಾದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಕನ್ನಡಿಗ ಕುಟುಂಬ ಆತ್ಮಹತ್ಯೆ ಆರೋಪ : ತನಿಖೆಗೆ ಹೆಚ್.ಡಿ ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಜುಲೈ,2,2021(wwww.justkannada.in): ಗೋವಾದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಒಳಗಾದ ಮುದ್ದೇಬಿಹಾಳ ಮೂಲದ ಒಂದೇ ಕುಟುಂಬದ ಮೂವರು ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ  ಗೋವಾ ಸಿಎಂ ಕೂಡಲೇ ಗಮನ ಹರಿಸಬೇಕು. ತನಿಖೆ ನಡೆಯಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಗೋವಾದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಒಳಗಾದ ಮುದ್ದೇಬಿಹಾಳ ಮೂಲದ ಒಂದೇ ಕುಟುಂಬದ ಮೂವರು ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಗೋವಾದಲ್ಲಿ ಕನ್ನಡಿಗರ ಬದುಕು ಎಂಥಾ ಡೋಲಾಯಮಾನ ಪರಿಸ್ಥಿತಿಯಲ್ಲಿದೆ, ಅಲ್ಲಿ ಕನ್ನಡಿಗರು ಎಂಥ ಅಪಾಯಕಾರಿ ಜೀವನ ನಡೆಸುತ್ತಿದ್ದಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿ ಎಂದಿದ್ದಾರೆ.

ಪ್ರಕರಣವೊಂದರಲ್ಲಿ ಕನ್ನಡಿಗ ಕುಟುಂಬಕ್ಕೆ ಗೋವಾದ ಪೊಲೀಸರು ಕಿರುಕುಳ ನೀಡಿದ್ದರು ಎಂಬುದು ಅವರ ಡೆತ್‌ ನೋಟ್‌ನಲ್ಲೇ ಇದೆ ಎನ್ನಲಾಗಿದೆ. ಕಳ್ಳತನದಂಥ ಬಂಡ ಬಾಳು ಬದುಕಿದ್ದಿದ್ದರೆ ಆ ಕುಟುಂಬ ಆತ್ಮಹತ್ಯೆಯಂಥ ನಿರ್ಧಾರಕ್ಕೆ ಬರುತ್ತಿರಲಿಲ್ಲ. ಕನ್ನಡಿಗರೆಂಬ ಕಾರಣಕ್ಕೆ ಈ ಕುಟುಂಬದ ಮೇಲೆ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮೂವರ ಆತ್ಮಹತ್ಯೆ ನಂತರ ಪೊಲೀಸರೂ ಅನುಮಾನಾಸ್ಪದವಾಗಿ ವರ್ತಿಸಿದ್ದಾರೆ. ತರಾತುರಿಯಲ್ಲಿ ಪಂಚನಾಮೆ ನಡೆಸಿದ್ದಾರೆ ಎಂಬ ಆರೋಪ ಸ್ಥಳೀಯ ಕನ್ನಡ ಸಂಘಟನೆಗಳಿಂದ ವ್ಯಕ್ತವಾಗಿದೆ. ಈ ಬಗ್ಗೆ @DrPramodPSawant ಕೂಡಲೇ ಗಮನ ಹರಿಸಬೇಕು. ಪೊಲೀಸ್‌ ಕಿರುಕುಳದ ನಿಟ್ಟಿನಲ್ಲಿ ತನಿಖೆ ನಡೆಯಬೇಕು. ಈ ಮೂಲಕ ಕನ್ನಡಿಗರ ಸುರಕ್ಷತೆಯನ್ನು ಖಾತ್ರಿಪಡಿಸಬೇಕು ಎಂದು ಗೋವಾ ಸಿಎಂಗೆ ಹೆಚ್.ಡಿಕೆ ಆಗ್ರಹಿಸಿದ್ದಾರೆ.

ಗೋವಾದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯಗಳಿಗೆ ಕೊನೆಮೊದಲಿಲ್ಲ ಎಂಬಂತಾಗಿದೆ. ಕನ್ನಡಿಗರನ್ನು ಒಕ್ಕಲೆಬ್ಬಿಸುವುದರಿಂದ ಆರಂಭಿಸಿ, ಸಣ್ಣ ಪುಟ್ಟ ಪ್ರಕರಣಗಳಲ್ಲಿ ಸಿಲುಕಿಸುವ ವರೆಗೆ ವಿಧವಿಧದ ದೌರ್ಜನ್ಯಗಳು ನಡೆಯುತ್ತಲೇ ಇವೆ. ಈ ಬಗ್ಗೆ ಕರ್ನಾಟಕ ಸರ್ಕಾರವೂ (@CMofKarnataka ) ಗಮನಹರಿಸಬೇಕು. ನಾನೂ ಕೂಡ @HMOIndia ಗೆ ಪತ್ರ ಬರೆಯುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ENGLISH SUMMARY…

Kannada family in Goa commits suicide due to police harassment: Former CM HDK writes to Goa CM to investigate
Bengaluru, July 02, 20w1 (www.justkannada.in): Following media reports of the alleged suicide in Goa by three members of the same family hailing from Karnataka, former Chief Minister H.D. Kumaraswamy has written a letter to the Goa Chief Minister demanding to conduct an investigation.
The tweet by the former Chief Minister of Karnataka read as follows: “According to media reports, the family members who were staying in Goa have committed suicide unable to face the insult. It shows how Kannadigas in Goa are staying in a dangerous condition.
“In the death note which has been recovered by the police, the deceased members have mentioned that they were harassed by Goa police and were in deep pain. If really the family members were guilty and have committed any crime why would have they committed suicide, they would have never taken such a decision. This incident shows clearly that the family has been harassed only because they are Kannadigas,” the tweet read.
Further, the tweet read that the behavior of the police is suspicious even after the incident. They have prepared the Panchanama in a hurry as alleged by several local Pro-Kannada organizations. Hence, I demand Dr. Pramod P Sawant consider this case seriously and demand an investigation.
H.D. Kumaraswamy also has mentioned that he has also demanded the Chief Minister of Karnataka and also write to the HMO India regarding this case.
Keywords: Former CM/ H.D. Kumaraswamy/ Suicide/ Goa/ incident / Karnataka family/ Muddebihal family

Key words: Kannadiga -family- suicide – Goa -HD Kumaraswamy – investigate