ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ವಸೂಲಿ ಖಂಡಿಸಿ ಮೈಸೂರಿನಲ್ಲಿ ಕರವೇ ಪ್ರತಿಭಟನೆ‌….

Promotion

ಮೈಸೂರು,ಡಿ,7,2019(www.justkannada.in): ಹೆದ್ದಾರಿ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲದಿದ್ದರೂ ಸಹ  ಟೋಲ್ ಶುಲ್ಕ ವಸೂಲಿಗೆ  ಮುಂದಾಗಿರುವುದನ್ನ ಖಂಡಿಸಿ ಮೈಸೂರಿನಲ್ಲಿ  ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉಪವಿಭಾಗೀಯ ಕಚೇರಿ ಬಳಿ ಜಮಾಯಿಸಿದ ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಘಟಕದ ಕಾರ್ಯಕರ್ತರು  ಹೆದ್ದಾರಿಗಳಲ್ಲಿ ಟೋಲ್ ಶುಲ್ಕ  ವಸೂಲಿ ಖಂಡಿಸಿ ಪ್ರತಿಭಟನೆ ನಡೆಸಿ ಅಕ್ರೋಶ ಹೊರ ಹಾಕಿದರು.

ಮೈಸೂರು-ನಂಜನಗೂಡು ಹೆದ್ದಾರಿ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಆದರೂ ಸಹ ಇಲ್ಲಿ ಟೋಲ್ ಶುಲ್ಕ ವಸೂಲಿಗೆ ಮುಂದಾಗಿರುವುದು ಖಂಡನೀಯ. ಅಲ್ಲದೆ ರಸ್ತೆಗಳು ಇನ್ನೂ ಸೂಕ್ತ ರೀತಿಯಲ್ಲಿ ನಿರ್ಮಾಣಗೊಂಡಿಲ್ಲ. ಸರ್ವೀಸ್ ರಸ್ತೆಯನ್ನು ಸಹ ನಿರ್ಮಾಣ ಮಾಡಿಲ್ಲ. ಇಷ್ಟೆಲ್ಲ ನ್ಯೂನ್ಯತೆಗಳಿದ್ದರೂ ಟೋಲ್ ನಲ್ಲಿ ಶುಲ್ಕ ವಸೂಲಿಗೆ ಮುಂದಾಗಿರುವುದು ಖಂಡನಾರ್ಹ ಈ ಬಗ್ಗೆ ಸಂಬಂಧ ಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸುವಂತೆ ಕರವೇ ಕಾರ್ಯಕರ್ತರು ಆಗ್ರಹಿಸಿದರು.

Key words: karave- Protest – Mysore –condemning- toll charges – highways