ಮೇ 22ರಿಂದ 3 ದಿನಗಳ ಕಾಲ ವಿಧಾನಸಭೆ ಅಧಿವೇಶನ: ಆರ್.​ವಿ ದೇಶಪಾಂಡೆ ಹಂಗಾಮಿ ಸ್ಪೀಕರ್

Promotion

ಬೆಂಗಳೂರು,ಮೇ,20,2023(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಇಂದು ಸಿಎಂ ಸಿದ್ಧರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇಂದು ಮೊದಲ ಸಚಿವ ಸಂಪುಟ ಸಭೆ ನಡೆದಿದ್ದು, ಮೇ 22ರಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ಮೇ 22ರಿಂದ ಒಟ್ಟು ಮೂರು ದಿನಗಳ ಕಾಲ ಅಧಿವೇಶನ ನಡೆಸಲಾಗುವುದು. ಹಂಗಾವಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದರು.

ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಇರಲಿದ್ದಾರೆ. ಎಲ್ಲಾ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಸಭಾಪತಿ ಆಯ್ಕೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Key words: Karnataka-Assembly -session – 3 days -May 22