ಇಷ್ಟು ದೊಡ್ಡ ಪ್ರಮಾಣದಲ್ಲಿ ಕಮಿಷನ್ ಪಡೆಯುವ ಸರ್ಕಾರ ನಾನು ಜೀವಮಾನದಲ್ಲಿ ನೋಡಿಲ್ಲ: ಸಿದ್ದರಾಮಯ್ಯ

 

ಮೈಸೂರು, ನ.19, 2021 : (www.justkannada.in news) ರಾಜ್ಯ ಸರ್ಕಾರ ವಜಾ ಮಾಡುವಂತೆ ರಾಜ್ಯ ಪಾಲರಿಗೆ ಪತ್ರ ಬರೆಯುತ್ತೇನೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ ಸಿದ್ದರಾಮಯ್ಯ ಹೇಳಿದಿಷ್ಟು…

ರಾಜ್ಯ ಗುತ್ತಿಗೆದಾರರ ಸಂಘದವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಪ್ರತೀ ಕಾಮಗಾರಿ ಟೆಂಡರ್ ಪಡೆಯಲು ಶೇ.40ರಷ್ಟು ಪರ್ಸೆಂಟೇಜ್ ಕೊಡಬೇಕು ಅಂತ ಆರೋಪಿಸಿದ್ದಾರೆ. ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಪರ್ಸೆಂಟೇಜ್ ಎಂಬುದನ್ನೂ ವಿವರಿಸಿದ್ದಾರೆ‌.
ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ಯಾವಯಾವ ಇಲಾಖೆಯಲ್ಲಿ ಎಷ್ಟೆಷ್ಟು ಪರ್ಸೆಂಟೇಜ್ ಎಂಬುದನ್ನು ಮಾಧ್ಯಮಗಳ ಮುಂದೆಯೇ ಬಹಿರಂಗವಾಗಿ ಹೇಳಿದ್ದಾರೆ.

ಈ ಆರೋಪಗಳನ್ನ ನಾನು ಮಾಡಿದ್ದರೆ ಪ್ರತಿಪಕ್ಷದವರು ಅನ್ನಬಹುದಿತ್ತು. ಆದರೆ ಟೆಂಡರ್ ಪಡೆಯುವವರೆ ಶೇ.40ಪರ್ಸೆಂಟ್ ಆರೋಪ ಮಾಡಿರುವುದರಿಂದ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮುಂದುವರೆಯಬಾರದು.

ಪ್ರಧಾನಿ ಮೋದಿಯವರು ‘ನಾ ಕಾವೂಂಗಾ ನಾ ಕಾನೇದೂಂಗಾ’ ಅನ್ನುತ್ತಿದ್ದರು. ಆದರೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಕಮಿಷನ್ ಪಡೆಯುವ ಸರ್ಕಾರವನ್ನ ನಾನು ಜೀವಮಾನದಲ್ಲಿ ನೋಡಿಲ್ಲ. ಹೀಗಾಗಿ ಕೂಡಲೇ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ.

Ayodhya-Before-siddaramayanahundi-Sri Rarma Darshan

key words : Karnataka-bjp-government-corrupt-40%-commission-siddaramaiha-allegation