ಸಿದ್ದರಾಮಯ್ಯ ಸ್ವಾಮೀಜಿಗಳ‌ ಮೌನವನ್ನೂ ತಮ್ಮ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ: ಟ್ವಿಟ್ಟರ್’ನಲ್ಲಿ ಬಿಜೆಪಿ ಟೀಕೆ

Promotion

ಬೆಂಗಳೂರು, ಮಾರ್ಚ್ 26, 2022 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ವಾಮೀಜಿಗಳ‌ ಮೌನವನ್ನೂ ತಮ್ಮ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂಬುದಾಗಿ ಬಿಜೆಪಿ ಕರ್ನಾಟಕ ಟೀಕಿಸಿದೆ.

ಈ‌ ಹಿಂದೆಯೂ ಹಲವು ಮಠಾಧೀಶರ ವಿರುದ್ಧ ಅಗೌರವಯುತವಾಗಿ ನಡೆದುಕೊಂಡಿದ್ದ ಸಿದ್ದರಾಮಯ್ಯ ಈಗ ಸ್ವಾಮೀಜಿಗಳ‌ ಮೌನವನ್ನೂ ತಮ್ಮ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಬಿಜೆಪಿ ದೂರಿದೆ.

ಸ್ವಾಮೀಜಿಗಳ ಬಗ್ಗೆ ನೀಡಿದ್ದಂತ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟ ಪಡಿಸಿ ಟ್ವಿಟ್ ಮಾಡಿದ್ದರು. ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂಬುದಾಗಿ ಸ್ಪಷ್ಟಪಡಿಸಿದ್ದರು.