ಪಿಯುಸಿ ಮಟ್ಟದಿಂದಲೇ ಆನ್ ಲೈನ್ ತರಗತಿಗೆ ಸಿಎಂ ಯಡಿಯೂರಪ್ಪ ಒಲವು.

Promotion

 

ಬೆಂಗಳೂರು, ಮೇ 26, 2020 : (www.justkannada.in news) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಕೋವಿಡ್ 19 ಹಿನ್ನೆಲೆಯಲ್ಲಿ ಆನ್ ಲೈನ್ ತರಗತಿಗಳ ಮೂಲಕ ಪಠ್ಯಕ್ರಮವನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದರು.

ಆನ್ ಲೈನ್ ತರಗತಿಗಳು ಸಾಮಾನ್ಯ ತರಗತಿಗಳಿಗೆ ಹೋಲಿಸಿದರೆ, ಕಡಿಮೆ ವೆಚ್ಚದ್ದಾಗಿದ್ದು, ಈ ವ್ಯವಸ್ಥೆಯನ್ನು ಪಿ.ಯು ಮಟ್ಟದಿಂದಲೇ ಪ್ರಾರಂಭಿಸುವ ಬಗ್ಗೆ ಪರಿಶೀಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

vkarnataka-cm-b.s.yadiyurappa-online-courses-from-puc

ಈ ವೇಳೆ ಮಾತನಾಡಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದದ್ದು ಇಷ್ಟು..

ಲಾಕಡೌನ್ ಪೂರ್ವದಲ್ಲಿ ಶೇ 79 ರಷ್ಟು ಪಠ್ಯಕ್ರಮ ಪೂರ್ಣಗೊಂಡಿದ್ದು, ಮೇ 31ರೊಳಗೆ ಶೇಕಡಾ 21ರಷ್ಟು ಪಠ್ಯಕ್ರಮಗಳನ್ನು ಆನ್‍ಲೈನ್ ಬೋಧನೆ ಮೂಲಕ ಪೂರ್ಣಗೊಳಿಸಲಾಗುವುದು.
ವೆಬ್‍ಎಕ್ಸ್, ಸ್ಕೈಪ್ ಹಾಗೂ ಇತರೆ ಆನ್‍ಲೈನ್ ಪ್ಲಾಟ್ ಫಾರಂ ಮೂಲಕ 30 ಸಾವಿರ ಆನ್‍ಲೈನ್ ತರಗತಿಗಳನ್ನು ನಡೆಸಲಾಗಿದೆ. ವಾಟ್ಸಪ್ ಮತ್ತು ಟೆಲಿಗ್ರಾಂ ಮೂಲಕ ಶೇಕಡಾ 85 ರಷ್ಟು ವಿದ್ಯಾಥಿಗಳಿಗೆ ಇ-ನೋಟ್ಸ್, ಪಿಪಿಟಿ ಹಾಗೂ ಹಳೆಯ ಪ್ರಶ್ನೆ ಪತ್ರಿಕೆಗಳ ವಿತರಣೆ ಮಾಡಲಾಗಿದೆ. ಜ್ಞಾನನಿಧಿ ಯು-ಟ್ಯೂಬ್ ಚಾನೆಲ್ ಮೂಲಕ 65 ವಿಷಯಗಳ 7074 ಬೋಧನಾ ವಿಡಿಯೋ ಅಪ್‍ಲೋಡ್ ಮಾಡಲಾಗಿದ್ದು, 5 ಲಕ್ಷ ವೀಕ್ಷಣೆಯಾಗಿದೆ.

ಗೆಟ್ ಸಿಇಟಿ ಗೋ ಮೂಲಕ 2 ಲಕಕ್ಕೂ ಅಧಿಕ ವಿದ್ಯಾರ್ಥಿಗಳನ್ನು ತಲುಪಲಾಗಿದ್ದು, 13600 ವಿದ್ಯಾರ್ಥಿಗಳು ಯು ಟ್ಯೂಬ್ ಚಂದಾದಾರರಾಗಿದ್ದಾರೆ. 90 ಸಾವಿರ ಲಾಗಿನ್ ಆಕ್ಟಿವ್ ಆಗಿದೆ. ಸದರಿ ಪೋರ್ಟಲ್‍ಗೆ ನಾಲ್ಕು ಸ್ಟಾರ್‍ಗಳು ದೊರೆತಿದ್ದು, ಉತ್ತಮ ಗುಣಮಟ್ಟ ಕಾಯ್ದುಕೊಳ್ಳಲಾಗಿದೆ. 10 ಸಾವಿರಕ್ಕೂ ಅಧಿಕ ಕರೆಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಪರಿಹರಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಉಚಿತ ಲ್ಯಾಪಟಾಪ್ ವಿತರಿಸಲಾಗಿರುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಕಲಿಕೆ ಅನುಷ್ಠಾನಕ್ಕೆ ಬರಲಿದೆ. ಕೋವಿಡ್ – 19 ರ ಪ್ರರಿಸ್ಥಿತಿಯಲ್ಲಿ ಡಿಜಿಟಲ್ ಕಲಿಕೆಗೆ ಹೆಚ್ಚಿನ ಮಹತ್ವ ಒದಗಿಸಲಾಗಿದ್ದು, ಮೈತ್ರಿ ಸಹಾಯವಾಣಿ ಪೋರ್ಟಲ್ ನಿಂದ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಪ್ರಯೋಜನಕಾರಿಯಾಗಿದೆ.

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ. ರಮಣರೆಡ್ಡಿ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಉಪಸ್ಥಿತರಿದ್ದರು.

 

key words : karnataka-cm-b.s.yadiyurappa-online-courses-from-puc