ಒಂದೇ ಹಂತದಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ವೋಟಿಂಗ್:  ಮೇ10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ.

Promotion

ನವದೆಹಲಿ,ಮಾರ್ಚ್,29,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಸರ್ಕಾರ ದಿನಾಂಕ ಘೋಷಣೆ ಮಾಡಿದ್ದು  224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಮೇ 10 ರಂದು ಮತದಾನ ನಡೆಯಲಿದ್ದು ಮೇ 13 ಶನಿವಾರದಂದು ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.

ಏಪ್ರಿಲ್ 13 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಏಪ್ರಿಲ್  20ಕ್ಕೆ ನಾಮಪತ್ರ ಸಲ್ಲಿಕೆಗೆ  ಕೊನೇ ದಿನವಾಗಿದೆ.  ಏಪ್ರಿಲ್ 24ರಂದು ನಾಮಪತ್ರ ವಾಪಸ್  ಪಡೆಯಲು ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.

Key words:  Karnataka election-may10-result-may 13