ಕರ್ನಾಟಕ ಹೈಕೋರ್ಟ್ ಹೇಳಿದ್ಧಷ್ಟು ಆಕ್ಸಿಜನ್ ನೀಡಲು ಆಗಲ್ಲ- ಸುಪ್ರೀಂಕೋರ್ಟ್ ಮೊರೆ ಹೋದ ಕೇಂದ್ರ ಸರ್ಕಾರ..

kannada t-shirts

ನವದೆಹಲಿ,ಮೇ,6,2021(www.justkannada.in):  ಕರ್ನಾಟಕ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಪ್ರಮಾಣ ಹೆಚ್ಚಿಸಬೇಕೆಂದು ಹೈಕೋರ್ಟ್ ನೀಡಿದ್ದ ಆದೇಶಕ್ಕೆ  ತಡೆ ನೀಡುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.jk

 ಕೋವಿಡ್-19 ರೋಗಿಗಳಿಗಾಗಿ ಆಕ್ಸಿಜನ್ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. Karnataka -High Court - provide – oxygen-central government - supreme court.

ಆದರೆ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಪ್ರಸ್ತುತ ಕರ್ನಾಟಕಕ್ಕೆ 965 ಮೆಟ್ರಿಕ್ ಟನ್ ಧ್ರುವೀಕೃತ ವೈದ್ಯಕೀಯ ಆಮ್ಲಜನಕವನ್ನು ಪೂರೈಸಲಾಗುತ್ತಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ.

 

Key words:  Karnataka -High Court – provide – oxygen-central government – supreme court.

website developers in mysore