ಐಟಿ ವೃತ್ತಿಪರರ ವರ್ಕ್‌ ಫ್ರಮ್‌ ಹೋಮ್‌ ಜುಲೈ 31ರ ವರೆಗೆ ವಿಸ್ತರಣೆ

kannada t-shirts

 

ಬೆಂಗಳೂರು, ಏ.28, 2020 : (www.justkannada.in news ) ಕೊವಿಡ್‌ ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕೊರೊನಾ ಲಾಕ್ ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್​ ಪ್ರಸಾದ್​ ಅವರು ಈ ವಿಷಯ ಪ್ರಕಟಿಸಿದ್ದಾರೆ.

ಲಾಕ್ ಡೌನ್ ಬಳಿಕ ರಾಜ್ಯ ಐಟಿ ವಲಯ ಎದುರಿಸುತ್ತಿರುವ ಸವಾಲುಗಳು, ಕಂಡುಕೊಂಡಿರುವ ಪರಿಹಾರಗಳು ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ವಿವರಿಸಿದ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ, ರಾಜ್ಯದ ಐಟಿ ವೃತ್ತಿ ಪರರಿಗೆ ಮುಂದಿನ ವರ್ಷ ಮಾರ್ಚ್‌ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಸದ್ಯ ಜುಲೈ 31ರ ವರೆಗೆ ವರ್ಕ್‌ ಫ್ರಮ್‌ ಹೋಂ ಸೌಲಭ್ಯ ವಿಸ್ತರಣೆ ಮಾಡಲಾಗುವುದು. ಪರಿಸ್ಥಿತಿ ನೋಡಿಕೊಂಡು ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಐಟಿ ವಲಯ ಸದ್ಯ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ರಾಜ್ಯದ ಐಟಿ ವೃತ್ತಿಪರರ ಜತೆ ಪ್ರತ್ಯೇಕ ವೀಡಿಯೋ ಕಾನ್ಫರೆನ್ಸ್‌ ನಡೆಸಬೇಕೆಂಬ ಡಾ. ಅಶ್ವತ್ಥನಾರಾಯಣ ಅವರ ಕೋರಿಕೆಗೂ ಸಕಾರಾತ್ಮಕವಾಗಿ ಸ್ಪಂದಿಸಿದ ರವಿ ಶಂಕರ್‌ ಪ್ರಸಾದ್‌, ಶೀಘ್ರದಲ್ಲೇ ವೀಡಿಯೋ ಕಾನ್ಫರೆನ್ಸ್‌ ನಡೆಸುವ ಭರವಸೆ ನೀಡಿದರು.

 karnataka-it-employees-work-from-home-extended-bangalore-dcm-dr.ashwath.narayan

ಕಾರ್ಯ ತಂತ್ರ ಸಮಿತಿ

“ಕೊವಿಡ್‌ನಂಥ ಪರಿಸ್ಥಿತಿ ಎದುರಾದಾಗ ಐಟಿ ಹಾಗೂ ಸಂಬಂಧಿತ ವಲಯಗಳು ಯಾವ ರೀತಿ ಕಾರ್ಯ ನಿರ್ವಹಿಸಬೇಕು. ವಿಪತ್ತಿನ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ, ಪರಿಹಾರ ಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲು ರಾಷ್ಟ್ರ ಮಟ್ಟದ ಕಾರ್ಯತಂತ್ರ ಸಮಿತಿ ರಚಿಸಲಾಗುವುದು,” ಎಂದು ಕೆಂದ್ರ ಸಚಿವರು ತಿಳಿಸಿದರು.
“ಐಟಿ ವಲಯ ಮಾತ್ರವಲ್ಲದೆ, ಎಲ್ಲ ರಾಜ್ಯಗಳು ಅನ್ವೇಷಣೆ, ಸ್ಟಾರ್ಟ್‌ಅಪ್‌ಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇ-ಆಡಳಿತ, ಇ-ಪಾಸ್‌ಗಳ ಪರಿಣಾಮಕಾರಿ ಜಾರಿಗೆ ಗಮನ ಹರಿಸಲಾಗುವುದು. ಜತೆಗೆ, ಕೊವಿಡ್‌ ಸಮಸ್ಯೆ ಎದುರಾದಾಗಿನಿಂದ ಬಹುತೇಕ ಎಲ್ಲ ವಲಯಗಳ ಕೆಲಸದ ರೀತಿ ನೀತಿ ಬದಲಾಗಿದ್ದು, ಶೇ. 80ರಷ್ಟು ಐಟಿ ವೃತ್ತಿಪರರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಎಲ್ಲ ಕೆಲಸ ಕಾರ್ಯಗಳು ಆನ್‌ಲೈನ್‌ ಮೂಲಕವೇ ನಡೆಯುತ್ತಿದೆ. ಇದಕ್ಕೆ ಅನುಕೂಲವಾಗುವಂತೆ ಭಾರತ್‌ ನೆಟ್‌ ಯೋಜನೆ ಮೂಲಕ ದೇಶದ ಮೂಲೆಮೂಲೆಗೂ ಇಂಟರ್ನೆಟ್‌ ಸಂಪರ್ಕ ಜಾಲ ಬಲಪಡಿಸಲಾಗುತ್ತದೆ ,” ಎಂದು ರವಿ ಶಂಕರ್‌ ಪ್ರಸಾದ್‌ ಹೇಳಿದರು.

ಮೇಕ್‌ ಇನ್‌ ಇಂಡಿಯಾ

“ಮೇಕ್‌ ಇನ್‌ ಇಂಡಿಯಾ ಯೋಜನೆಗಳ ಕಾರ್ಯರೂಪಕ್ಕೆ ಇದು ಸಕಾಲ. ಕೊವಿಡ್‌ ನಂತರದಲ್ಲಿ ದೇಶದ ಆರ್ಥಿಕತೆಯ ಪುನಶ್ಚೇತನಕ್ಕೆ ಮೇಕ್‌ ಇನ್‌ ಇಂಡಿಯಾ ಯೋಜನೆಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ನಾವು ತಕ್ಕ ಮಟ್ಟಿನ ಯಶಸ್ಸು ಪಡೆದಿದ್ದರೂ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುವುದಕ್ಕೂ ಮೊದಲು ದೇಶದಲ್ಲಿ ಇದ್ದ ಮೊಬೈಲ್‌ ಉತ್ಪಾದಕ ಸಂಸ್ಥೆಗಳ ಸಂಖ್ಯೆ 2 ರಿಂದ 268ಕ್ಕೆ ಏರಿದೆ. ಮೇಕ್‌ ಇನ್‌ ಇಂಡಿಯಾ ಯೋಜನೆ ಯಶಸ್ಸಿಗೆ ಇದು ಅತ್ಯುತ್ತಮ ಉದಾಹರಣೆ,” ಎಂದು ವಿವರಿಸಿದರು.

 karnataka-it-employees-work-from-home-extended-bangalore-dcm-dr.ashwath.narayan
ಸಿಪ್ಲಾ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿ ಇಂದು 50 ಲಕ್ಷ ರೂ. ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು.

ಆನ್‌ಲೈನ್‌ ಆರೋಗ್ಯ ಸೇವೆ

“ಕೊವಿಡ್‌ ನಂತರ ಆರೋಗ್ಯ ಸೇವೆಯಲ್ಲೂ ತಂತ್ರಜ್ಞಾನದ ಬಳಕೆ ಹೆಚ್ಚಿದ್ದು ಆನ್‌ಲೈನ್ ಆರೋಗ್ಯ ವ್ಯವಸ್ಥೆಗೆ ಹೆಚ್ಚು ಒತ್ತು ನೀಡಲಾಗಿದೆ. ಕರ್ನಾಟಕ ಸೇರಿಂದಂತೆ ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಆನ್‌ಲೈನ್‌ ಆರೋಗ್ಯ ಸೇವೆ ಉತ್ತಮವಾಗಿದ್ದು, ಇತರ ರಾಜ್ಯಗಳಲ್ಲೂ ಇದು ವಿಸ್ತರಣೆ ಆಗಬೇಕು,” ಎಂದರು.

ಆಪ್ತ ಮಿತ್ರ ಹೆಲ್ಪ್‌ಲೈನ್‌

ಶಿಕ್ಷಣ, ಅಗತ್ಯ ವಸ್ತುಗಳ ಪೂರೈಕೆ ಮುಂತಾದ ಹಲವು ಕಾರ್ಯಗಳಲ್ಲಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂಬುದನ್ನು ಡಾ. ಅಶ್ವತ್ಥನಾರಾಯಣ ವೀಡಿಯೋ ಕಾನ್ಫರೆನ್ಸ್‌ನಲ್ಲಿ ವಿವರಿಸಿದರು.
“500ಕ್ಕೂ ಹೆಚ್ಚು ವೃತ್ತಿಪರರು ‘ಆಪ್ತ ಮಿತ್ರ ಹೆಲ್ಪ್‌ಲೈನ್‌’ನ ಕಾಲ್‌ ಸೆಂಟರ್‌ನಲ್ಲಿ ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ನಿತ್ಯ ಸುಮಾರು 50 ಸಾವಿರ ಕರೆಗಳನ್ನು ಸ್ವೀಕರಿಸಿ, ಜನರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದಾರೆ. ಇ-ಕಾಮರ್ಸ್‌ಗೆ ಪರ್ಯಾಯವಾದ ವ್ಯವಸ್ಥೆ ಕಂಡುಕೊಂಡಿದ್ದು, ರೆಡ್‌ಜೋನ್‌ನಲ್ಲಿರುವ ಜನ ಮನೆಯಿಂದ ಹೊರ ಬರುವ ಅಗತ್ಯ ಬಾರದಂತೆ ಎಲ್ಲ ವಸ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಆಗುತ್ತಿದೆ. ದಿನಸಿ, ಹಾಲು, ಔಷಧ, ತರಕಾರಿ ಮುಂತಾದ ವಸ್ತುಗಳನ್ನು ಮನೆಗೆ ತಲುಪಿಸಲು ವಿಧಿಸುತ್ತಿರುವ ದರ ಕೇವಲ 10 ರೂಪಾಯಿ. ಒಂದೇ ರೀತಿಯ ಸೇವೆ (ಪರಿಹಾರ ಸಾಮಗ್ರಿಗಳು) ಬೇರೆ ಬೇರೆ ಇಲಾಖೆಗಳಿಂದ ಪುನರಾವರ್ತನೆ ಆಗದಂತೆ ತಡೆಯಲು ತಂತ್ರಜ್ಞಾನದ ಮೊರೆ ಹೋಗಲಾಗಿದೆ,” ಎಂದು ಉಪಮುಖ್ಯಮಂತ್ರಿ ತಿಳಿಸಿದರು.

 

KEY WORDS : karnataka-it-employees-work-from-home-extended-bangalore-dcm-dr.ashwath.narayan

 

WFH for IT extended up to July 31

Bangaluru:
In view of the pandemic Covid 19, Centre has given permission for IT professionals to work from home till July 31.Union Minister for Information Technology and Telecommunication Ravi Shankar Prasad informed the decision to all State IT Ministers during the video conference to discuss problems of the IT sector due to lockdown.

Responding to a suggestion made by Deputy Chief Minister Dr CN Ashwath Narayan to extend the permission to WFH upto March 31, 2021, the Union Minister permitted the WFH up to July while assuring to review the situation and take decision after July. Dr Ashwath Narayan explained problems faced by the IT sector post Covid 19 lockdown and the solutions found besides steps taken by the State government.
The Union Minister also agreed to a suggestion to hold a separate Video Conference with the IT honchos soon to understand the problems of their sector.

National Strategy Committee

The Union Minister announced to set up a national level strategy committee to prepare  detailed guidelines, solutions in a pandemic situation like Covid 19.
In view of the change in the working conditions after the lockdown, the Union Minister said that steps would be taken to strengthen the Bharat Net to provide better internet facilities. “Not just the IT sector, all States should give importance to develop startups and research. Focus will be on providing effective E governance and E passes. The working of almost all sectors after Covid 19 has changed. Nearly 80 per cent professionals are working from home. Almost all works are done through online. To help this, internet services will be strengthened through Bharat Net,” Prasad said.

Make in India. Ravishankar Prasad said that this is the right opportunity to implement the Make in India. Stress should be given on Make in India to revive the economy. Though we have been successful to an extent in this, there is a need to give more thrust on make in India in the coming days. Number of mobile companies have increased from two to 268 after Prime Minister Narendra Modi’s government. This is a good example of Make in India, the Union Minister said.

Online Health Services

Ravishankar Prasad appreciated the online health services of Karnataka and said that there is an improvement in online services after the pandemic breakout. “Online health services have improved after Covid 19. All States should also improve on this front,” he said.

Aptamitra Helpline

Dr Ashwath Narayan explained how the State government has been successful in using technology to provide education and other essential services. More than 500 professionals, are working at call centre `Aptamitra Helpline.’  On an average every day, they receive at least 50,000 calls from various sections of people and responding to their needs. As an alternative to e commerce, Aptamitra helpline provides all essentials including groceries, medicines to people’s doorsteps in red zones

website developers in mysore