ಫೆ,12 ರಂದು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ‘ಮಾಧ್ಯಮದಲ್ಲಿ ಮಹಿಳೆ ಹೊಸ ಸವಾಲುಗಳು’ ಕುರಿತು ವಿಚಾರ ಸಂಕಿರಣ…

Promotion

ಬೆಂಗಳೂರು,ಫೆ,10,2020(www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಪತ್ರಕರ್ತೆಯರ ಸಂಘ, ಕರ್ನಾಟಕ ರಾಜ್ಯ ಮಹಿಳಾ ವಿಶ್ವ ವಿದ್ಯಾನಿಲಯ ವಿಜಯಪುರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 12 ಎಂದು ಒಂದು ದಿನದ ವಿಚಾರ ಸಂಕಿರಣವನ್ನ ಆಯೋಜಿಸಲಾಗಿದೆ.

ಬೆಂಗಳೂರಿನ ಭಾರತಿ ವಿದ್ಯಾಭವನ ಖಿಂಚ ಸಂಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಮಾಧ್ಯಮದಲ್ಲಿ ಮಹಿಳೆ: ಹೊಸ ಸವಾಲುಗಳು ಎಂಬ ವಿಷಯದಲ್ಲಿ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಹಿರಿಯ ಪತ್ರಕರ್ತರಾದ ಡಾ.ವಿಜಯ ಅವರು ಕಾರ್ಯಕ್ರಮವನ್ನ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಂತ್ವನಾ ಭಟ್ಟಾಚಾರ್ಯ  ಆಶಯ ಭಾಷಣಗಳನ್ನ ಮಾಡಲಿದ್ದಾರೆ.

ಹಿರಿಯ ಪತ್ರಕರ್ತೆ ಡಾ.ಆರ್ ಪೂರ್ಣಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮಾಧ್ಯಮ ಆಕಾಡೆಮಿ ಅಧ್ಯಕ್ಷರು ಆದ ಕ್ಯಾಪ್ಟನ್ ಪಿ. ಮಣಿವಣ್ಣನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಸ್.ಎನ್ ಸಿದ್ಧರಾಮಪ್ಪ, ಸೇರಿ ಹಲವರು ಉಪಸ್ಥಿತರಿರಲಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳು ಸೇರಿದಂತೆ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

Key words: Karnataka media academy – Feb 12- Seminar