ಎಸ್ ಎಸ್ ಎಲ್ ಸಿ / ಪಿಯುಸಿ ಪರೀಕ್ಷೆಗೆ ಸಿದ್ಧತೆ ಬಗ್ಗೆ ಸಚಿವ ಸುರೇಶ್ ಕುಮಾರ್ ನೀಡಿದ ಮಾಹಿತಿ ಹೀಗಿದೆ..

 

ಬೆಂಗಳೂರು, ಮೇ 18, 2020 : (www.justkannada.in news ) : ಎಸ್ಎಸ್ ಎಲ್ ಸಿ ಪರೀಕ್ಷೆ. ರಾಜ್ಯಾದ್ಯಂತ 2879 ಪರೀಕ್ಷಾ ಕೇಂದ್ರಗಳು. 43,720 ಕೊಠಡಿಗಳು ‌ಮೀಸಲು.

ಪ್ರತಿ ವಿದ್ಯಾರ್ಥಿ ಗೆ ಮಾಸ್ಕ್ ಕಡ್ಡಾಯ. ಸ್ಕೌಟ್ಸ್ ಮತ್ತು ಗೈಡ್ಸ್ ಸಿಬ್ಬಂದಿ ವತಿಯಿಂದ ಮಾಸ್ಕ್ ವಿತರಣೆಗೆ ವ್ಯವಸ್ಥೆ.

ಪ್ರಾಥಮಿಕ ಮತ್ತು ಫ್ರೌಢ‌ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಟಿ. ‌ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರದ ವ್ಯವಸ್ಥೆ. ಪರೀಕ್ಷಾ ಕೊಠಡಿಗಳ ಸಂಪೂರ್ಣ ಸ್ಯಾನಿಟೈಸೇಷನ್ ವ್ಯವಸ್ಥೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಚಂದನ ವಾಹಿನಿ ಮೂಲಕ ಪುನರ್ ಮನನ ಕಾರ್ಯಕ್ರಮ ಮಾಡಲಾಗಿದೆ. ಇದು ಈ ತಿಂಗಳ ಅಂತ್ಯದವರೆಗೆ ಮುಂದುವರೆಯಲಿದೆ.

ರಾಜ್ಯದಲ್ಲಿ ಎಂಟು ಲಕ್ಷದ ನಲವತ್ತೆಂಟು‌ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಜೂನ್ ೨೫ ರಿಂದ ಜುಲೈ ೪ ರವರೆಗೆ ನಡೆಸಲು ನಿರ್ಧಾರ. ದ್ವಿತೀಯ ಪಿಯುಸಿ ಇಂಗ್ಲಿಷ್ ಪತ್ರಿಕೆ ಪರೀಕ್ಷೆ ಜೂನ್ ೧೮ ರಂದು ನಡೆಸಲಾಗುವುದು.

key words : karnataka-sslc-puc-exams-sureshkumar-minister