ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ವಿಶಾಲ ಅವಕಾಶ: ಸರ್ಕಾರ ಹೆಚ್ಚು ಒತ್ತು ನೀಡಿದೆ- ಕಾರ್ಯಗಾರ ಉದ್ಘಾಟಿಸಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ..

kannada t-shirts

ಬೆಂಗಳೂರು,ಡಿ,18,2019(www.justkannada.in): ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ವಿಶಾಲ ಅವಕಾಶವಿದ್ದು ನಮ್ಮ ಸರ್ಕಾರ ಹೆಚ್ಚು ಒತ್ತು ನೀಡಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ಇಂದಿನಿಂದ ಎರಡು ದಿನಗಳ ಕಾಲ  ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿರುವ ಕರ್ನಾಟಕ ಪ್ರವಾಸೋದ್ಯಮ ನೀತಿ 2020-25 ಕಾರ್ಯಾಗಾರವನ್ನ  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದರು.  ಸಮಾರಂಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಪ್ರವಾಸೋದ್ಯಮ ಕುರಿತ ವಿಷನ್ ಗ್ರೂಪ್ ಅಧ್ಯಕ್ಷೆ ಸುಧಾ ಮೂರ್ತಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಅನಿಲ್ ಕುಮಾರ್, ನಿರ್ದೇಶಕ ಕೆ.ಎನ್. ರಮೇಶ್ ಉಪಸ್ಥಿತರಿದ್ದರು

ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ನಮ್ಮ ಸರ್ಕಾರ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ಕೊಟ್ಟಿದೆ. ಪ್ರವಾಸೋದಕ್ಕೆ ರಾಜ್ಯದಲ್ಲಿ ವಿಶಾಲ ಅವಕಾಶ ಇದೆ. ಪ್ರವಾಸೋದ್ಯಮ ಮೊದಲ 5ಸ್ಥಾನಕ್ಕೆ ಏರಿಸುವ ಪ್ರಯತ್ನ ನಡೆಯುತ್ತಾ ಇದೆ. ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯ ಹೆಚ್ಚಿಸಲು ಎಲ್ಲಾ ಕೆಲಸ ನಡೆಯುತ್ತಾ ಇದೆ. ಸುಧಾಮೂರ್ತಿಯವರ ನೇತೃತ್ವದಲ್ಲಿ 6-7 ತಿಂಗಳಲ್ಲಿ ಬದಲಾವಣೆ ಕಾಣುವ ನಿರೀಕ್ಷೆ ಇದೆ ಎಂದು ನುಡಿದರು.

Key words: Karnataka Tourism Policy 2020-25-workshop-cm bs yeddyurappa- sudhamurthi

website developers in mysore