ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಹೋರಾಟಕ್ಕೆ ಕರ್ನಾಟಕ ಪ್ರಗತಿಪರರ ಸಂಘಟನೆ ಬೆಂಬಲ

Promotion

ಮೈಸೂರು,ಅಕ್ಟೊಂಬರ್,05,2020 : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಕಳೆದ 11 ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ಪ್ರಗತಿಪರರ ಸಂಘಟನೆ ಬೆಂಬಲ ಸೂಚಿಸಿದೆ ಎಂದು ಸಂಘಟನೆಯ ಅಧ್ಯಕ್ಷ ಆರ್.ಲಕ್ಷ್ಮಣ್ ತಿಳಿಸಿದರು.jk-logo-justkannada-logoಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗಳನ್ನು ಸಮಾನ ಕೆಲಸ, ಸಮಾನ ವೇತನ, ಸೇವಾ ಭದ್ರತೆ, ಪ್ರೋತ್ಸಾಹ ಧನ ಸೇರಿದಂತೆ ಹಲವಾರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಹನ್ನೊಂದು ದಿನಗಳಿಂದ ವೈದ್ಯಕೀಯ ಸಿಬ್ಬಂದಿ ರಾಜ್ಯಾದ್ಯಂತ ಮುಷ್ಕರವನ್ನು ನಡೆಸುತ್ತಿದ್ದಾರೆ. ಆದರೂ ಈವರೆಗೂ ಸರಕಾರ ಮಾತ್ರ ಸಮಸ್ಯೆ ಬಗೆಹರಿಸಲು ಮುಂದಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Karnataka-Progressives-Association-supports-struggle-contracting-outsourcing-employees

ಕೋವಿಡ್ ೧೯ ಸಂಕಷ್ಟ ಪರಿಸ್ಥಿತಿಯಲ್ಲಿ ಲಾಕ್ ಡೌನ್ ಪ್ರಾರಂಭವಾದಾಗಿನಿಂದಲೂ ಗುತ್ತಿಗೆ ಆಧಾರಿತ ವೈದ್ಯಕೀಯ ಸಿಬ್ಬಂದಿಯು ತಮ್ಮ ಜೀವವನ್ನು ಲೆಕ್ಕಿಸದೇ ಜನತೆಯ ಆರೋಗ್ಯ ರಕ್ಷಣೆಗಾಗಿ, ಕೋವಿಡ್ ನಿಯಂತ್ರಣಕ್ಕಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿಕೊಂಡು ಬಂದಿದ್ದಾರೆ. ಕೊರೊನಾ ವಾರಿಯರ್ಸ್‌ಳಾಗಿರುವ ಇವರಿಗೆ ಸೇವಾ ಭದ್ರತೆ, ಜೀವನ ಭದ್ರತೆ, ಆರೋಗ್ಯ ಭದ್ರತೆ ಹಾಗೂ ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸದೆ ಇವರ ಹಿತಾಸಕ್ತಿಯನ್ನು ನಿರ್ಲಕ್ಷ್ಯಿಸಿರುವುದು ಕಾರ್ಮಿಕ ವಿರೋಧಿ ಧೋರಣೆಯಾಗಿದೆ. ಅವರ ಬೇಡಿಕೆಗಳನ್ನು ಸರಕಾರ ಕೂಡಲೇ ಈಡೇರಿಸಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಕಂದೆಗಾಲ ಶಿವಣ್ಣ, ತಿಪ್ಪಯ್ಯ ಹಾಜರಿದ್ದರು.

key words : Karnataka-Progressives-Association-supports-struggle-contracting-outsourcing-employees