ಹಾಲಿವುಡ್, ಬಾಲಿವುಡ್ ದಾಖಲೆಗಳೆಲ್ಲವನ್ನೂ ಚಿಂದಿ ಉಡಾಯಿಸಿದ ಕೆಜಿಎಫ್-2

ಬೆಂಗಳೂರು, ಜನವರಿ 09, 2021 (www.justkannada.in): ಭಾರತದ ಚಿತ್ರರಂಗದಲ್ಲಿ ಕೆಜಿಎಫ್​2 ಟೀಸರ್​ ಹೊಸ ದಾಖಲೆ ನಿರ್ಮಿಸಿದೆ.

ಬಿಡುಗಡೆಗೊಂಡ 24 ಗಂಟೆಗಳಲ್ಲಿ ಈ ಟೀಸರ್​ 78 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದೆ. ಈ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಅಧಿಕ ವೀಕ್ಷಣೆ ಪಡೆದ ಸಿನಿಮಾ ಟೀಸರ್​ ಇದಾಗಿದೆ.

ಕಡಿಮೆ ಸಮಯದಲ್ಲಿ ಅತಿ ಹೆಚ್ಚು ಲೈಕ್ಸ್​ ಪಡೆದ ಟೀಸರ್​ ಎಂಬ ಖ್ಯಾತಿಗೂ ಪಾತ್ರವಾಗಿದೆ. ಟೀಸರ್​ ಈ ಮಟ್ಟದ ದಾಖಲೆ ಮಾಡಿರುವುದಕ್ಕೆ ಯಶ್​ ಸೇರಿದಂತೆ ಇಡೀ ಚಿತ್ರತಂಡ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನು ಟೀಸರ್​ಗೆ ಸಿಗುತ್ತಿರುವ ವೀಕ್ಷಣೆ ಹಾಗೂ ಲೈಕ್ಸ್​ ಹೆಚ್ಚುತ್ತಲೇ ಇದೆ. ಸದ್ಯಕ್ಕೆ 9 ಕೋಟಿಗೂ ಅಧಿಕ ವೀಕ್ಷಣೆ ಪಡೆದಿದ್ದು, ಈ ಸಂಖ್ಯೆ ಹೆಚ್ಚುತ್ತಲೇ ಇದೆ.