ಕೊಡಗು, ದಕ್ಷಿಣ ಕನ್ನಡ ಸೇರಿ ರಾಜ್ಯಾದ್ಯಂತ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ.  

ಚಿಕ್ಕಮಗಳೂರು,ಜುಲೈ,4,2022(www.justkannada.in):  ರಾಜ್ಯದಲ್ಲಿ ಮುಂಗಾರು ಮಳೆ  ಆರ್ಭಟ ಜೋರಾಗಿದ್ದು. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿ  ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ, ಮಲೆನಾಡು ಭಾಗಗಳಲ್ಲಿ  ನಿರಂತರ ಮಳೆ ಸುರಿಯುತ್ತಿದ್ದು, ಇದರಿದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ.  ಭಟ್ಕಳ, ಹೊನ್ನಾವರ, ಅಂಕೋಲ ಕುಮುಟ, ಬೆಳ್ತಂಗಡಿಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ನಾನಘಟ್ಟದಲ್ಲಿ ನೀರಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ.

ಇನ್ನು ಕೊಡುಗು ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟ ಮುಂದುವರೆದಿದ್ದು, ಬಾಗಮಂಡಲ-ನಾಪೋಕ್ಲು ರಸ್ತೆ ಜಲಾವೃತವಾಗಿದೆ.  ಬಾಗಮಂಡಲ ಭಾಗದಲ್ಲಿ ರಜೆ ನೀಡಲು ಸ್ಥಳೀಯರು  ಒತ್ತಾಯಿಸಿದ್ದಾರೆ.  ಕೊಡಗು ಜಿಲ್ಲೆಯ  ಮೊಣ್ಣಂಗೇರಿ ಗ್ರಾಮದಲ್ಲಿ ರಸ್ತೆ ಮೇಲೆ ಮಣ್ಣು ಕುಸಿದಿದೆ.

ಇನ್ನು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಸುತ್ತಮುತ್ತ ಕಳೆದ ರಾತ್ರಿಯಿಡೀ ಮಳೆ ಸುರಿದ ಪರಿಣಾಮ. ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದಾಗಿ ಕಳಸಾದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಕಳಸ-ಹೊರನಾಡು ದೇವಸ್ಥಾನದ ರಸ್ತೆ ಸಂಪರ್ಕ ಕಡಿತವಾಗಿದೆ. ಜಿಲ್ಲೆಯ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಪ್ರತಿ ಮಳೆಗಾಲದಲ್ಲೂ ಮುಳುಗಡೆಯಾಗುತ್ತದೆಯಾದರೂ ಈ ಬಾರಿ ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದೆ.

Key words: Kodagu-Dakshina Kannada – heavy -rain