ಎರಡು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆ…

Promotion

ಕೊಡಗು,ಅ,14,2019(www.justkannada.in): ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲ್ಲೂಕಿನಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿಮ ಶನಿವಾರ ಸಂತೆಯ ಮಾಲಂಬಿ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮಾಲಂಬಿ ಗ್ರಾಮದ ಬಿ.ಪಿ.ಚಂದ್ರಪ್ಪ (52) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಚಂದ್ರಪ್ಪ ಎರಡು ದಿನಗಳಿಂದ ನಾಪತ್ತೆಯಾಗಿದ್ದು ಇಂದು ಬೆಳಿಗ್ಗೆ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಇನ್ನು ಪೊಲೀಸ್ ಸಿಬ್ಬಂದಿ ಶವವನ್ನ ಹೊರ ತೆಗೆದಿದ್ದಾರೆ. ಚಂದ್ರಪ್ಪ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಈ ಕುರಿತು ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Keyw words: kodagu-man – missing – two days -found -dead today.