ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಿಡಿ: ಕರ್ತವ್ಯಕ್ಕೆ ಹಾಜರಾಗುವಂತೆ ಸಾರಿಗೆ ನೌಕರರ ಬಳಿ ಸಿಎಂ ಬಿಎಸ್ ವೈ ಮನವಿ

ಬೆಂಗಳೂರು,ಡಿಸೆಂಬರ್,12,2020(www.justkannada.in):   ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸುತ್ತಿದ್ದಾರೆ. ಸಾರ್ವಜನಿಕ ಆಸ್ತಿಪಾಸ್ತಿ ಉಂಟಾಗಲು ಅವರೇ ಕಾರಣ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.logo-justkannada-mysore

ಈ ಕುರಿತಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದುಷ್ಟಕರ ಸಂಗತಿಯಾಗಿದೆ. ಈ ಮುಷ್ಕರದಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿಯವರಿಗೆ ಸಲಹೆ ಸೂಚನೆಗಳನ್ನು ನೀಡಿದ್ದೇನೆ. ಸಾರಿಗೆ ಸಚಿವರೂ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ.

ಆದ್ರೇ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಕೆಲವು ಸಾರಿಗೆ ನೌಕರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಮತ್ತು ರಾಜ್ಯದ ವಿವಿಧೆಡೆ ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಲು ಕಾರಣಕರ್ತರಾಗಿರುತ್ತಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.kodihalli-chandrashekar-against-cm-bs-yeddyurapa-appeals-transport-employees

ಹೆಚ್.ಡಿಕೆ ಬಗ್ಗೆ ಮಾತು ಖಂಡನೀಯ..

ಅಲ್ಲದೇ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ಅವರು ಅತ್ಯಂತ ಲಘವಾಗಿ ಮಾತನಾಡಿರುವುದು ಕೂಡ ಖಂಡನೀಯವಾಗಿದೆ. ಸಾರ್ವಜನಿಕ ಹಿತದೃಷ್ಠಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ, ಕರ್ತವ್ಯಕ್ಕೆ ಮರಳಿ, ನಂತ್ರ ಸಾರಿಗೆ ಸಚಿವರ ಜೊತೆ ಚರ್ಚೆಗೆ ಬರಲು ಮತ್ತೊಮ್ಮೆ ಮನವಿ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

Key words: Kodihalli chandrashekar- against -CM BS yeddyurapa- appeals – transport employees