ಸೋಷಿಯಲ್ ಮೀಡಿಯಾದಲ್ಲಿ ಮತ್ತೊಂದು ವರ್ಕೌಟ್ ವೀಡಿಯೋ ಪೋಸ್ಟ್ ಮಾಡಿದ ಕೊಯ್ಲಿ

Promotion

ಮುಂಬೈ, ಜುಲೈ 04, 2020 (www.justkannada.in): ಅಚ್ಚುಮೆಚ್ಚಿನ ವರ್ಕ್ ಔಟ್ ನ ಮತ್ತೊಂದು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿರಾಟ್ ಕೊಯ್ಲಿ ಅಪ್ ಲೋಡ್ ಮಾಡಿದ್ದಾರೆ.

ಫಿಟ್ನೆಸ್ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೊಹ್ಲಿ ತಮ್ಮ ದೈನಂದಿನ ವರ್ಕ್ ಔಟ್ ನ್ನು ನಿಲ್ಲಿಸಿಲ್ಲ. ಇತ್ತೀಚೆಗಷ್ಟೇ ಕ್ಲ್ಯಾಪ್ ಪುಶ್-ಅಪ್ಸ್ ವರ್ಕೌಟ್ ನ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ವಿರಾಟ್ ಕೊಹ್ಲಿ ಹಂಚಿಕೊಂಡಿದ್ದಾರೆ.

ಅಂದಹಾಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮುಂಬೈ ನ ತಮ್ಮ ನಿವಾಸದಲ್ಲಿ ಕುಟುಂಬದ ಜೊತೆ ಇದ್ದಾರೆ.