ಕೋಲಾರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ

Promotion

ಕೋಲಾರ, ಜನವರಿ 09, 2021 (www.justkannada.in): ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಮಧ್ಯೆ ಹೊಡೆದಾಟ ನಡೆದಿದೆ.

ಕೋಲಾರದ ಅಂತರಗಂಗೆ ಬೆಟ್ಟದಲ್ಲಿನ ತೇರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೊಡೆದಾಟದಲ್ಲಿ 5 ಮಹಿಳೆಯರು ಸೇರಿ ಒಟ್ಟು 10 ಮಂದಿ ಗಾಯಗೊಂಡಿದ್ದಾರೆ. ಗಾಯಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರು ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿದ ವಿಚಾರಕ್ಕೆ ಗಲಾಟೆ ಆರಂಭವಾಗಿದೆ. ಬಳಿಕ ಕಾರಿನಲ್ಲಿದ್ದವರು ತೆರಳಿ ಗುಂಪು ಕಟ್ಟಿಕೊಂಡು ಮತ್ತೆ ಗ್ರಾಮಸ್ತರ ಜೊತೆಗೆ ಗಲಾಟೆ ಮಾಡಿದ್ದಾರೆ.

ಗಲಾಟೆಗೆ ಬಂದಿದ್ದವರ ಮೇಲೆ ತೇರಹಳ್ಳಿ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಮಧ್ಯರಾತ್ರಿ ಜಿಲ್ಲಾಸ್ಪತ್ರೆ ಬಳಿ ಗುಂಪುಗೂಡಿದ್ದ ಎರಡೂ ಕಡೆಯವರನ್ನು ನಗರಠಾಣೆ ಪೋಲೀಸರು ಲಘು ಲಾಠಿ ಪ್ರಹಾರ ಮಾಡಿ ಚದುರಿಸಿದ್ದಾರೆ.
ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ, ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.