ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಗೊಂದಲ ವಿಚಾರ: ಇಬ್ಬರು ‘ಕೈ’ ನಾಯಕರು ದೆಹಲಿಗೆ ದೌಡು…

kannada t-shirts

ಬೆಂಗಳೂರು,ಮಾ,6,2020(www.justkannada.in):   ಕೆಪಿಸಿಸಿ ಅಧ್ಯಕ್ಷರ ನೇಮಕ ಪ್ರಕ್ರಿಯೆ ಕಾಂಗ್ರೆಸ್ ನಲ್ಲಿ ಕಗ್ಗಂಟಾಗಿ ಉಳಿದಿರುವ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ.  ಈ ಸಂಬಂಧ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಲು ಕಾಂಗ್ರೆಸ್ ನಾಯಕರಾದ ಡಿ.ಕೆ ಶಿವಕುಮಾರ್ ಮತ್ತು ದಿನೇಶ್ ಗುಂಡೂರಾವ್ ದೆಹಲಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಕೆಲ ತಿಂಗಳಿಂದ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಸಾಕಷ್ಟು ಗೊಂದಲಗಳು  ಉಂಟಾಗಿದ್ದು ಈ ಕುರಿತು ರಾಜ್ಯ ನಾಯಕರು ಹಲವು ಬಾರಿ ಪಕ್ಷದ ಹೈಕಮಾಂಡ್  ಭೇಟಿಯಾಗಿ ಚರ್ಚಿಸಿದ್ದರು. ಈ ನಡುವೆ ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಗುಲಾಂನಬಿ ಆಜಾದ್ ಸಹ ರಾಜ್ಯಕ್ಕೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ ಕುರಿತು ಚರ್ಚಿಸಿದ್ದರು. ಆದರೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕಗ್ಗಂಟು ಮಾತ್ರ ಇನ್ನು ಮುಗಿದಿಲ್ಲ.

ಹೀಗಾಗಿ ಇಂದು ಈ ವಿಚಾರ ಕುರಿತು ಚರ್ಚಿಸಲು ಕಾಂಗ್ರೆಸ್ ನಾಯಕರಾದ ದಿನೇಶ್ ಗುಂಡೂರಾವ್ ಮತ್ತು ಮಾಜಿ ಸಚಿವ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಇಬ್ಬರು ನಾಯಕರು ಸಮಯ ಕೇಳಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತು ಮಾತುಕತೆ  ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ದಿನೇಶ್ ಗುಂಡೂರಾವ್, ರಾಹುಲ್ ಗಾಂಧಿ ಭೇಟಿಗೆ ದೆಹಲಿಗೆ ಬಂದಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯ ಏನೇ ಇರಲಿ. ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.

Key words: KPCC –president- Confusion- two- congress- leader-Delhi.

website developers in mysore