ಡಿಕೆಶಿ ಅವರೇ ನಿಮ್ಮ ಧನಬಲ ಮಾತ್ರ ಬಳಸಿಕೊಂಡು ಅಧಿಕಾರ ಸಮಯದಲ್ಲಿ ದೂರ ಇಡುತ್ತಾರೆ- ರಾಜ್ಯ ಬಿಜೆಪಿ ವ್ಯಂಗ್ಯ.

Promotion

ಬೆಂಗಳೂರು,ಮೇ,17,2022(www.justkannada.in):  ಡಿಕೆ ಶಿವಕುಮಾರ್ ಅವರೇ ಕಾಣದ ಕೈಗಳು ನಿಮ್ಮ ಅಧಿಕಾರವನ್ನು ನಿಮ್ಮ ಮುಂದೆಯೇ ಹೀಗೆಯೇ ಕಿತ್ತುಕೊಳ್ಳುತ್ತಾರೆ. ನಿಮ್ಮ ಧನ ಬಲ ಮಾತ್ರ ಬಳಸಿಕೊಳ್ಳುತ್ತಾರೆ, ಅಧಿಕಾರದ ಸಮಯದಲ್ಲಿ ದೂರ ಇಡುತ್ತಾರೆ ಎಂದು ರಾಜ್ಯ ಬಿಜೆಪಿ ಘಟಕ ಲೇವಡಿ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಮಾನ್ಯ ಡಿಕೆಶಿ ಅವರೇ  ಕೈಗೆ ಬಂದ ತುತ್ತು, ನಿಮ್ಮ ಬಾಯಿಗೆ ಬರುವುದಿಲ್ಲ. ಈ ಸತ್ಯವನ್ನು ಈಗಲಾದರೂ ಅರಿತುಕೊಳ್ಳಿ. ಕಾಣದ ಕೈಗಳು ನಿಮ್ಮ ಅಧಿಕಾರವನ್ನು ನಿಮ್ಮ ಮುಂದೆಯೇ ಹೀಗೆಯೇ ಕಿತ್ತುಕೊಳ್ಳುತ್ತಾರೆ. ನಿಮ್ಮ ಧನ ಬಲ ಮಾತ್ರ ಬಳಸಿಕೊಳ್ಳುತ್ತಾರೆ, ಅಧಿಕಾರದ ಸಮಯದಲ್ಲಿ ದೂರ ಇಡುತ್ತಾರೆ. ಡಿಕೆ ಶಿವಕುಮಾರ್ ಇಷ್ಟೊಂದು ದುರ್ಬಲವೇ..? ಎಂದು ವ್ಯಂಗ್ಯವಾಡಿದೆ.

ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ನಕಲಿ ಗಾಂಧಿಗಳು ನಿಮ್ಮನ್ನು ಇಡುವಲ್ಲಿಯೇ ಇಡುತ್ತಾರೆ. ಹೈಕಮಾಂಡ್‌ ಮಟ್ಟದಲ್ಲಿ ಟ್ರಬಲ್‌ ಶೂಟರ್‌ ಎನಿಸಿಕೊಂಡಿರುವ ಡಿಕೆಶಿ ಅವರ ಹುಟ್ಟುಹಬ್ಬದ ಕೇಕ್ ತಿನ್ನಿಸುವಷ್ಟೂ ಪ್ರಿಯಾಂಕ ಗಾಂಧಿಗೆ ಸೌಜನ್ಯವಿಲ್ಲ. ಮತ್ತೊಬ್ಬರ‌ ಕೈಯಲ್ಲಿ ಕೇಕ್‌ ತಿನ್ನಿಸುವ ಪ್ರಮೇಯವೇನಿತ್ತು?

ಕೇಕ್‌ ತಿನ್ನಿಸಲು ನಿರಾಕರಣೆ, ರಮ್ಯಾ ಟ್ವೀಟ್‌ ದಾಳಿ, ಎಂಬಿ ಪಾಟೀಲ್ ಸಿಡಿದೆದ್ದಿದ್ದು, ಸಿದ್ದರಾಮಯ್ಯ & ಬಣದ ಇತ್ತೀಚೆಗಿನ ನಡೆ, ಕೆಪಿಸಿಸಿ ಕಚೇರಿಯಲ್ಲಿ ಭ್ರಷ್ಟಾಚಾರದ ಆರೋಪ ಇದೆಲ್ಲವೂ ಡಿಕೆಶಿ ಅವರನ್ನ ಹರಕೆಯ ಕುರಿ ಮಾಢುವ ತಂತ್ರ.  ಈ ಎಲ್ಲ ಘಟನೆಗಳು ಏನೋ ಮುನ್ಸೂಚನೆ ನೀಡುತ್ತಿರುವುದು ನಿಜವಲ್ಲವೇ? ಎಂದು ರಾಜ್ಯ ಬಿಜೆಪಿ ಟಾಂಗ್ ನೀಡಿದೆ.

Key words: KPCC-president-DK Shivakumar-bjp-tweet