ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಬಳಿಕ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ.

Promotion

ನವದೆಹಲಿ,ಜೂನ್,22,2021(www.justkannada.in):  ಹೈಕಮಾಂಡ್ ಭೇಟಿ ಮಾಡಿ ಪಕ್ಷ ಸಂಘಟನೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ನವದೆಹಲಿಗೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾದರು.jk

ನವದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್,  ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರ ಬದಲಾವಣೆ, ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಹಾಗೆಯೇ ಮುಂದಿನ ಸಿಎಂ ಬಗ್ಗೆ ಹೇಳಿಕೆಗೆ ಬ್ರೇಕ್ ಹಾಕುವಂತೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿ ಭೇಟಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ರಾಜ್ಯದ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದೇನೆ. ಆದರೆ ಏನು ಮಾತನಾಡಿದ್ದೇನೆ ಎಂದು ಬಹಿರಂಗವಾಗಿ ಹೇಳಲ್ಲ. ಕಾಂಗ್ರೆಸ್ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಕೊರೋನಾ ಸಂಕಷ್ಟದಲ್ಲಿ ಕಾಂಗ್ರೆಸ್ ಮಾಡುತ್ತಿರುವ ಕೆಲಸದ ಬಗ್ಗೆ ವಿವರ ನೀಡಿದ್ದೇನೆ ಎಂದರು.

Key words: kpcc president-DK Shivakumar meet-Congress leader -Rahul Gandhi