ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಮುಹೂರ್ತ ಫಿಕ್ಸ್….

Promotion

ಬೆಂಗಳೂರು,ಜೂ,15,2020(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಜುಲೈ 2 ರಂದು ಬೆಳಿಗ್ಗೆ 10.30ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಅಂದು  ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಕೆಪಿಸಿಸಿ ಕಚೇರಿ ನೂತನ ಕಟ್ಟಡದಲ್ಲಿ ಕಾರ್ಯಕ್ರಮ ನಡೆಯಲಿದ್ದು ತಾಂತ್ರಿಕ ಸಮಸ್ಯೆ ಎದುರಾದರೇ ಗ್ಲೋಬಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. kpcc-president-dk-shivakumar-program

ಏಕ ಕಾಲಕ್ಕೆ 2800 ಸ್ಥಳಗಳಿಂದ ವೈಲ್ ಸ್ಟ್ರೀಮಿಂಗ್ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಲಾಗುದ್ದು ಇದರಿಂದ 15 ಲಕ್ಷ ಕಾರ್ಯಕರ್ತರನ್ನ ಸಂಪರ್ಕಿಸಬಹುದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಕುರಿತು ವಿವಾದ ಉಂಟಾಗಿತ್ತು. ಕೊರೋನಾ ಹಿನ್ನೆಲೆ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ಕಿಡಿಕಾರಿದ್ದರು. ನಂತರ ಪದಗ್ರಹಣ ಕಾರ್ಯಕ್ರಮಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅನುಮತಿ ನೀಡಿದ್ದರು.

Key words: KPCC -president -DK Shivakumar –program