ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳು ವಾಪಸ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕೆ.

ಬೆಂಗಳೂರು,ನವೆಂಬರ್,19,2021(www.justkannada.in):  ರೈತರು ನಡೆಸುತ್ತಿದ್ದ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು  ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆದಿದ್ದು ಪ್ರಧಾನಿ ಮೋದಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕೆ ವ್ಯಕ್ತಪಡಿಸಿದ್ದಾರೆ.

ಹೌದು, ಚುನಾವಣೆ ಗಮನದಲ್ಲಿಟ್ಟುಕೊಂಡು ಕಾಯ್ದೆ ಹಿಂಪಡೆದಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಕಾಯ್ದೆಗಳನ್ನ ವಾಪಸ್ ಪಡೆದಿದೆ ಎಂದು ಡಿ.ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಇನ್ನು ಕೇಂದ್ರದ ನಿರ್ಧಾರವನ್ನ ಸ್ವಾಗತಿಸಿರುವ ಡಿ.ಕೆ ಶಿವಕುಮಾರ್, ಇದು ರೈತರ ಹೋರಾಟಕ್ಕೆ ಸಂದ ಜಯ. ಎಲ್ಲಾ ನಾಯಕರು  ಪಕ್ಷಾತೀತವಾಗಿ ಹೋರಾಟ ಬೆಂಬಲಿಸಿದ್ದಾರೆ. ಮತದಾರರು ಎಷ್ಟು ಸ್ಟ್ರಾಂಗ್ ಎಂದು ಇದರಿಂದ ತಿಳಿಯುತ್ತೆ ಇದು ಅನ್ನದಾತರ ಹೋರಾಟಕ್ಕೆ ಸಿಕ್ಕಜಯ ಎಂದು ನುಡಿದರು.

Key words: KPCC president -DK Sivakumar -criticizes – withdrawal – Center’s- Agricultural Amendment Act