ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ನ್ಯಾಯ ಒದಗಿಸಿಕೊಡುತ್ತೇನೆ ಎಂದ ಡಿ.ಕೆ ಶಿವಕುಮಾರ್…

ಬೆಂಗಳೂರು,ನವೆಂಬರ್,21,2020(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಭೇಟಿಯಾಗಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.kannada-journalist-media-fourth-estate-under-loss

ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭ ಪ್ರಕರಣ  ಮತ್ತು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ್ದ  ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೆ  ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಇಂದು ಭೇಟಿ ಮಾಡಿ, ಸಮಾಲೋಚನೆ ನಡೆಸಿದ್ದಾರೆ.kpcc- president- DK Sivakumar –mla-Akhand SrinivasaMurthy-meet

ಇದೇ ವೇಳೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸುವಂತೆಯೂ ಮನವಿ ಮಾಡಲಿದ್ದಾರೆ ಎನ್ನಲಾಗಿದೆ. ಶಾಸಕ ಅಖಂಡ ಶ್ರೀನಿವಾಸ್ ಭೇಟಿಯ ಬಳಿಕ  ಮಾಧ್ಯಮದ ಜತೆ  ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ತಮಗಾದ ಅನ್ಯಾಯವನ್ನು, ನೋವನ್ನು ಶಾಸಕ ಅಖಂಡ ಶ್ರೀನಿವಾಸ್ ಹಂಚಿಕೊಂಡಿದ್ದಾರೆ. ಅವರ ಸಂಕಷ್ಟ ನನಗೆ ಅರ್ಥವಾಗುತ್ತದೆ. ಅವರಿಗೆ ಖಂಡಿತವಾಗಿ ನ್ಯಾಯ ಒದಗಿಸಿಕೊಡುತ್ತೇನೆ. ಶಿಸ್ತುಕ್ರಮಕ್ಕೆ ಪಕ್ಷದ ಶಿಸ್ತುಪಾಲನಾ ಸಮಿತಿಗೆ ಶಿಫಾರಸ್ಸು ಮಾಡುತ್ತೇನೆ ಎಂದು ತಿಳಿಸಿದರು.

Key words: kpcc- president- DK Sivakumar –mla-Akhand SrinivasaMurthy-meet