ನಾಳೆ ಹುಟ್ಟೂರು ಹೆಗ್ಗವಾಡಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಅಂತ್ಯಕ್ರಿಯೆ.

Promotion

ಮೈಸೂರು,11,2023(www.justkannada.in):  ಹೃದಯಾಘಾತದಿಂದ ಇಂದು ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಅವರ ಅಂತ್ಯಕ್ರಿಯೆ ನಾಳೆ ಅವರ ಹುಟ್ಟೂರು ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿಯಲ್ಲಿ ನಡೆಯಲಿದೆ.

ನಾಳೆ ಮಧ್ಯಾಹ್ನ 2 ಗಂಟೆ ವೇಳೆಗೆ ಧೃವನಾರಾಯಣ್ ಅವರ ಅಂತ್ಯಕ್ರಿಯೆ ನೆರವೇರಲಿದ್ದು ಸಂಬಂಧಿಕರು, ರಾಜಕೀಯ ನಾಯಕರು, ಸ್ನೇಹಿತರು ಭಾಗಿಯಾಗಲಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆವರೆಗೆ ಮೈಸೂರಿನ ವಿಜಯನಗರದ ನಿವಾಸದಲ್ಲಿ ಪಾರ್ಥಿವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಿದ್ದು, ಮೈಸೂರು ಕಾಂಗ್ರೆಸ್ ಕಚೇರಿಯಲ್ಲಿಯೂ ಅಂತಿಮ ದರ್ಶನಕ್ಕೆ ವ್ಯವಸ್ಥೆ  ಮಾಡಲಾಗುತ್ತಿದೆ. ನಂತರ  ಹುಲ್ಲಳ್ಳಿ ರಸ್ತೆಯಿಂದ ಪಾರ್ಥೀವ ಶರೀರದ  ಮೆರವಣಿಗೆ ನಡೆಯಲಿದ್ದು ಇದಾದ ಬಳಿಕ ಹುಟ್ಟೂರು ಹೆಗ್ಗವಾಡಿಗೆ ಪಾರ್ಥಿವ ಶರೀರ ರವಾನೆಯಾಗಲಿದೆ. ನಾಳೆ ಮಧ್ಯಾಹ್ನ 2 ಗಂಟೆಗೆ ಆರ್.ಧೃವನಾರಾಯಣ್ ಅಂತ್ಯಕ್ರಿಯೆ ನೆರವೇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: KPCC –Working- President -R. Dhruvanarayan- funeral- Heggavadi tomorrow