ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ರಾಜ್ಯದಲ್ಲೇ 2ನೇ ಸ್ಥಾನ ಪಡೆದ ಮೈಸೂರಿನ ಕೆ.ಆರ್.ಆಸ್ಪತ್ರೆ….

Promotion

ಮೈಸೂರು,ಜ,2,2020(www.justkannada.in):  ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ  ಮೈಸೂರಿನ ಕೆ.ಆರ್.ಆಸ್ಪತ್ರೆ ರಾಜ್ಯದಲ್ಲೇ 2ನೇ ಸ್ಥಾನ ಪಡೆದಿದ್ದು, ಈ ಮೂಲಕ ಕೆ.ಆರ್ ಆಸ್ಪತ್ರೆಯ ವೈದ್ಯರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಯಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿ ಕಳೆದ ತಿಂಗಳಿನಲ್ಲಿ 1281 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಡಿಸೆಂಬರ್ 2019 ರಲ್ಲಿ 1281ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಕೃಷ್ಣರಾಜೇಂದ್ರ  ಆಸ್ಪತ್ರೆ ಎರಡನೇ ಸ್ಥಾನ ಪಡೆದಿದೆ.

ಕೆ. ಆರ್  ಆಸ್ಪತ್ರೆಯು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವುದರಲ್ಲಿ ಮುಂದಿದ್ದು, ಸ್ವಚ್ಛತೆಯೊಂದಿಗೆ ಗುಣಮಟ್ಟದ ಹಾಗೂ ಸೋಂಕು ರಹಿತ ಆರೋಗ್ಯ ಸೇವೆ ನೀಡುವ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇನ್ನು ಆಯಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ  ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಮೊದಲ ಸ್ಥಾನ ಪಡೆದಿದೆ. 1308 ರೋಗಿಗಳಿಗೆ ಚಿಕಿತ್ಸೆ ನೀಡಿ ಕಿದ್ವಾಯಿ ಆಸ್ಪತ್ರೆ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದೆ.

Key words: KR Hospital – Mysore- ranked -2nd – state – Ayushman Bharat Health Karnataka