ನಾಳೆಯಿಂದ ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಓಪನ್….

Promotion

ಬೆಂಗಳೂರು,ಆಗಸ್ಟ್,31,2020(www.justkannada.in): ಕೊರೋನಾ ಲಾಕ್ ಡೌನ್ ಹಿನ್ನೆಲೆ ಕಳೆದ ಐದು ತಿಂಗಳಿನಿಂದ ಬಂದ್ ಆಗಿದ್ದ ಬೆಂಗಳೂರಿನ ಕೆ.ಆರ್ ಮಾರ್ಕೆಟ್ ನಾಳೆಯಿಂದ ತೆರೆಯಲಿದೆ.jk-logo-justkannada-logo

ಕೊರೋನಾ ಮಹಾಮಾರಿ ಹೆಚ್ಚಾಗುತ್ತಿದ್ದ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆ ಕಳೆದ ಐದು ತಿಂಗಳಿನಿಂದ ಕಲಾಸಿಪಾಳ್ಯ ಮತ್ತು ಕೆ.ಆರ್‌. ಮಾರ್ಕೆಟ್ ಗಳು ಬಂದ್ ಆಗಿದ್ದವು. ಇದೀಗ ನಾಳೆಯಿಂದ ಕೆ.ಆರ್ ಮಾರ್ಕೆಟ್ ಪುನಾರಂಭಗೊಳ್ಳಲಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮ ಅನುಸರಿಸಿ ಮಾರ್ಕೆಟ್ ಓಪನ್ ಮಾಡಲಾಗುತ್ತದೆ. ಮಾರುಕಟ್ಟೆಯೊಳಗೆ ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಕಡ್ಡಾಯವಾಗಿರುತ್ತದೆ. ಅಂಗಡಿ ಮಾಲೀಕರು ಪ್ರತ್ಯೇಕ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು ಎಂದು ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

Key words: KR Market -Open –tomorrow-bbmp- Commissioner.